ಬೆಂಗಳೂರು:ನಿತ್ಯೋತ್ಸವ ಕವಿ ಪ್ರೊ. ಕೆ.ಎಸ್. ನಿಸಾರ್​ ಅಹಮದ್​(84) ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.
ಟ್ವೀಟ್​ ಮೂಲಕ ನುಡಿ ನಮನ ಸಲ್ಲಿಸಿರುವ ಮಾಜಿ ಸಿಎಂ ಎಚ್​ಡಿಕೆ, ನಿತ್ಯೋತ್ಸವದ ಕವಿ ಪ್ರೊ. ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಮನಸು ಗಾಂಧಿಬಜಾರು ಹಾಗು ನಿತ್ಯೋತ್ಸವ, ಇವು ನಿಸಾರ್ ಅವರ ಪ್ರಸಿದ್ಧ ಕವನ ಸಂಕಲನಗಳಾಗಿವೆ. ನಿಸಾರ್‍ ಅಹಮದ್ ಸಂವೇದನಾಶೀಲ ಹಾಗೂ ಜನಪ್ರಿಯ ಕವಿ. ಇವರ ನಿಧನದಿಂದ ಬಹುಮುಖ ಪ್ರತಿಭೆಯ ಸಾಹಿತ್ಯ ಪ್ರಭೆ ಮಸುಕಾದಂತಾಗಿದೆ ಎಂದಿದ್ದಾರೆ.
ಇದನ್ನೂ ಓದಿ:ಅಗಲಿದ ನಿತ್ಯೋತ್ಸವ ಕವಿಗೆ ಸ್ಯಾಂಡಲ್​ವುಡ್​ ನಮನ
‘ಜೋಗದ ಸಿರಿ ಬೆಳಕಿನಲ್ಲಿ’ ಹಾಡು ನನ್ನ ಕಿವಿಯಲ್ಲಿ ಈಗಲೂ ಅನುರಣಿಸುತ್ತಿದೆ. ನಾಡಿನ ಸಾಂಸ್ಕೃತಿಕ ರಾಯಭಾರಿಯಾಗಿದ್ದ ನಿಸಾರ್ ಅಹಮದ್ ಅವರ ಸಾಹಿತ್ಯ ಸೇವೆ ಅನನ್ಯ. ನಾಡು ಕಂಡ ಹೆಮ್ಮೆಯ ಸಾಹಿತಿ. 73ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ನಿಸಾರ್ ಅವರ ಕುಟುಂಬದ ಸದಸ್ಯರು ಮತ್ತು ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆಂದರು.
ಇದನ್ನೂ ಓದಿ:ನಿತ್ಯೋತ್ಸವ ಕವಿ ನಿಸಾರ್​ ಅಹಮದ್​ ನಿಧನದಿಂದ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿತು: ಸಿಎಂ ಯಡಿಯೂರಪ್ಪ
ನಿತ್ಯೋತ್ಸವದ ಕವಿ ಪ್ರೊ. ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ.ಮನಸು ಗಾಂಧಿಬಜಾರು ಹಾಗು ನಿತ್ಯೋತ್ಸವ ಇವು ನಿಸಾರ್ ಅವರ ಪ್ರಸಿದ್ಧ ಕವನ ಸಂಕಲನಗಳಾಗಿವೆ. ನಿಸಾರ್‍ ಅಹಮದ್ ಸಂವೇದನಾಶೀಲ ಹಾಗೂ ಜನಪ್ರಿಯ ಕವಿ. ಇವರ ನಿಧನದಿಂದ ಬಹುಮುಖ ಪ್ರತಿಭೆಯ ಸಾಹಿತ್ಯ ಪ್ರಭೆ ಮುಸುಕಾದಂತಾಗಿದೆ.1/3pic.twitter.com/Vwp3v6Be59
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)May 3, 2020

ಕನ್ನಡದ ನಿತ್ಯೋತ್ಸವ ಕವಿ ಡಾ.ಕೆ.ಎಸ್​. ನಿಸಾರ್​ ಅಹಮ್ಮದ್​ ಇನ್ನಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
