ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆ-ಸೆಟ್ ಕೀ ಉತ್ತರ ಮತ್ತು ಪಿಎಸ್‌ಐ ಮರು ಪರೀಕ್ಷೆ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿದೆ.
ಜ.13ರಂದು ಕೆ-ಸೆಟ್ ಮತ್ತು ಜ.23ರಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರೀಕ್ಷೆಗಳನ್ನು ನಡೆಸಲಾಗಿತ್ತು. ಕೆಇಎ ವೆಬ್‌ಸೈಟ್‌ನಲ್ಲಿರುವ ಲಿಂಕ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಬಹುದು.ಕೆ ಸೆಟ್ ಪರೀಕ್ಷೆಗೆ ಕುರಿತಂತೆ ಪ್ರತಿ ಆಕ್ಷೇಪಣೆಗೆ 300 ರೂ.ಗಳಂತೆ ಜ.31ರಿಂದ ಫೆ.7ರ ಅವಧಿಯಲ್ಲಿ ಶುಲ್ಕ ಪಾವತಿಸಿ ಆಕ್ಷೇಪಣೆಗಳನ್ನು ಫೆ.7ರ ಸಂಜೆ 5 ರೊಳಗೆ ಸಲ್ಲಿಸಬಹುದು.
ಪಿಎಸ್‌ಐ ಪರೀಕ್ಷೆಯ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ಅರ್ಜಿ ಸಂಖ್ಯೆ, ಹೆಸರು, ಜನ್ಮ ದಿನಾಂಕವನ್ನು ನಮೂದಿಸಬೇಕು. ಪೂರಕ ದಾಖಲೆಗಳೊಂದಿಗೆ ಫೆ.5ರ ಸಂಜೆ 5 ಗಂಟೆಯೊಳಗೆ ಆನ್‌ಲೈನ್ ಮೂಲಕ ವೆಬ್‌ಸೈಟ್‌ನಲ್ಲಿ ನೀಡಿರುವ ಲಿಂಕ್ ಮೂಲಕವೇ ಸಲ್ಲಿಸಬೇಕು. ಪತ್ರ ಮತ್ತು ಇ- ಮೇಲ್‌ನಲ್ಲಿ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:14 + nineteen =
Remember me
