ಉಪ್ಪಿನಂಗಡಿ:ಕಡಬ ತಾಲ್ಲೂಕು ಕೋಡಿಂಬಾಳ ಗ್ರಾಮದ ಪುಳಿಕ್ಕುಕ್ಕು ಎಂಬಲ್ಲಿ ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ, ಪೊದೆಯಲ್ಲಿ ಸಿಲುಕಿಕೊಂಡಿದ್ದ ಯುವಕನನ್ನು ಅಗ್ನಿಶಾಮಕ ದಳ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಸೋಮವಾರ ರಕ್ಷಿಸಿದ್ದಾರೆ.
ಇದನ್ನೂ ಓದಿ:ಭೀಕರ ಪ್ರವಾಹಕ್ಕೆ ಅಸ್ಸಾಂ ತತ್ತರ: ಕಾಜಿರಂಗ ಪಾರ್ಕ್‍ನಲ್ಲಿ 131 ವನ್ಯಜೀವಿಗಳ ಬಲಿ
ರಕ್ಷಣೆ ಮಾಡಲಾದ ಯುವಕ‌ನನ್ನು ಆಂಧ್ರಪ್ರದೇಶದ ಮಡಕಸಿರ ನಿವಾಸಿ ರವಿ ಕುಮಾರ್ ಎಂದು ಗುರುತಿಸಲಾಗಿದೆ. ಚಿಕಿತ್ಸೆಗಾಗಿ ಆತನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ವರ್ಷಗಳಿಂದ ಆತ ಬೆಂಗಳೂರು ಮಾರತಹಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದ ಯುವಕ ನಷ್ಟ ಅನುಭವಿಸಿ ಸುಮಾರು 2 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿರುವುದಾಗಿ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾರೆ.

ಸಾಲಭಾದೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದ. ಈ ಕಾರಣಕ್ಕಾಗಿ ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಮುಗಿಸಿ ಕಡಬ-ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿಗೆ ಬಂದಿದ್ದ. ಸೋಮವಾರ ಮುಂಜಾನೆ 5ರ ಸುಮಾರಿಗೆ ತನ್ನ ಬ್ಯಾಗ್​ನ್ನು ಬಸ್ ನಿಲ್ದಾಣದಲ್ಲೇ ಇರಿಸಿ ತನ್ನ ಕೈಯನ್ನು ತುಂಡರಿಸಿಕೊಂಡು ನದಿಗೆ ಹಾರಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ.

ಮೈತುಂಬಿ ಹರಿಯುತ್ತಿದ್ದ ಕುಮಾರಧಾರ ನದಿಗೆ ಹಾರಿದ ಬಳಿಕ ಅದೃಷ್ಟವಶಾತ್ ಪೊದೆಯೊಂದರಲ್ಲಿ ಸಿಲುಕಿಕೊಂಡಿದ್ದ. ಬಳಿಕ ರಕ್ಷಣೆಗಾಗಿ ಕೂಗಾಡಿದ್ದ. ಹೀಗಾಗಿ ಸ್ಥಳೀಯರು ಇಲಾಖೆಗೆ ಮಾಹಿತಿ ತಿಳಿಸಿದ್ದರು. ಕೂಡಲೇ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ, ಪೊಲೀಸರು, ವಿಪತ್ತು ನಿರ್ವಹಣಾ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಆತನನ್ನು ರಕ್ಷಿಸಿದ್ದಾರೆ.
ಈತನ ಪ್ಯಾಂಟ್ ಜೇಬಿನಲ್ಲಿ ಹತ್ತು ಸಾವಿರ ರೂಪಾಯಿ ಪತ್ತೆಯಾಗಿದೆ. ಕೈಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಕಡಬ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
