ಶಿವಮೊಗ್ಗ:ಇದೀಗ ತಾನೇ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿಗೆ ಸೇರ್ಪಡೆಯಾಗಿ ನಾನಾ ರೀತಿಯ ಪ್ರಶ್ನೆಗಳನ್ನು ಹುಟ್ಟು ಹಾಕಿದ್ದರು. ಅವರ ಹಿಂದೆಯೇ ಕಾಗೋಡು ತಿಮ್ಮಪ್ಪ ಕೂಡ ಬಿಜೆಪಿ ಸೇರುತ್ತಾರಾ ಎನ್ನುವ ಊಹಾಪೋಹಗಳು ಹುಟ್ಟಿಕೊಂಡಿದ್ದು ಇದೀಗ ಕಾಂಗ್ರೆಸ್​ ಹಿರಿಯ ಶಾಸಕರು ಎಲ್ಲಾ ಪ್ರಶ್ನೆಗಳನ್ನೂ ಬಗೆಹರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾಗೋಡು ತಿಮ್ಮಪ್ಪ, “ಮಗಳು ಬಿಜೆಪಿ ಸೇರಲು ಹೊರಟಿರುವುದು ನನ್ನ ಎದೆಗೆ ಚೂರಿ ಹಾಕಿದಂತಾಗಿದೆ. ಆಕೆ ಇಂತಹ ಕೆಲಸ ಮಾಡಬಾರದಿತ್ತು” ಎಂದು ಬೇಸರ ಹೊರ ಹಾಕಿದ್ದಾರೆ.
ಪುತ್ರಿ ರಾಜನಂದಿನಿ ಬಿಜೆಪಿ ಸೇರಲು ಹೊರಟಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, “ಈ ವಿಚಾರ ನನಗೆ ಗೊತ್ತಿರಲಿಲ್ಲ. ನನಗೆ ಈಗಷ್ಟೇ ವಿಷಯ ಗೊತ್ತಾಯಿತು. ರಾಜ ನಂದಿನಿ ಈ ರೀತಿ ಮಾಡುತ್ತಾಳೆ ಎಂದು ಕನಸಿನಲ್ಲೂ ಯೋಚಿಸಿರಲಿಲ್ಲ. ಇದೆಲ್ಲ ಶಾಸಕ ಹರತಾಳು ಹಾಲಪ್ಪ ಅವರ ತಂತ್ರ ಇರಬಹುದು” ಎಂದು ಹೇಳಿದ್ದಾರೆ.
ಇದೇ ವೇಳೆಯಲ್ಲಿ ಅವರು “ನಾವೆಲ್ಲ ರಾಜಕಾರಣದಲ್ಲಿ ಬದ್ಧತೆ, ಸ್ಥಿರತೆ ಇಟ್ಟುಕೊಂಡು ಬೆಳೆದು ಬಂದವರು. ಆ ಸಂತೋಷ ನನಗೆ ಇದೆ. ಏನೇ ಆಗಲಿ ನಾನು ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ. ನಾನು ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿಯೇ ನಿಲ್ಲುತ್ತೇನೆ” ಎಂದು ಕಾಗೋಡು ತಿಮ್ಮಪ್ಪ ಸ್ಪಷ್ಟನೆ ನೀಡಿದರು.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:one × 3 =
Remember me
