| ಶಿವಮೂರ್ತಿ ಹಿರೇಮಠ ರಾಯಚೂರುಎಡದೊರೆ ನಾಡು ಖ್ಯಾತಿಯ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಬಿಸಿ ಹೆಚ್ಚಾಗಿದೆ. ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾಹಣಿಯಿಂದಾಗಿ ಕ್ಷೇತ್ರ ರಂಗೇರಿದೆ. ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಒಳಗೊಂಡ ಕ್ಷೇತ್ರವು ಹಿಂದೆ ಕಾಂಗ್ರೆಸ್ ಭದ್ರಕೋಟೆ ಆಗಿತ್ತು. ಆದರೆ, ಬಿಜೆಪಿ ಎರಡು ಬಾರಿ ಗೆಲುವು ಸಾಧಿಸುವ ಮೂಲಕ ಅದನ್ನು ಸುಳ್ಳು ಮಾಡಿದೆ. ಬಿಜೆಪಿಯ ರಾಜಾ ಅಮರೇಶ್ವರ ನಾಯಕ ಎರಡನೇ ಬಾರಿಗೆ ಸಂಸತ್ ಪ್ರವೇಶಿಸಲು ಪ್ರಯತ್ನ ನಡೆಸುತ್ತಿದ್ದರೆ, ಕಾಂಗ್ರೆಸ್ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರನಾಯಕ ಅವರನ್ನು ಕಣಕ್ಕಿಳಿಸಿ ಕ್ಷೇತ್ರ ವಶದ ತವಕದಲ್ಲಿದೆ.
ಬಿಜೆಪಿಗೆ ಮೋದಿ ಅಲೆ ಹಾಗೂ ಕಾರ್ಯಕರ್ತರ ಪಡೆ ದೊಡ್ಡ ಶಕ್ತಿಯಾಗಿದೆ. ಕ್ಷೇತ್ರದ ಎಂಟು ವಿಧಾನಸಭೆ ಕ್ಷೇತ್ರಗಳಲ್ಲಿ ಐದರಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಜಿಲ್ಲೆಯಲ್ಲಿ ಹಿಡಿತ ಹೊಂದಿರುವ ಸಚಿವ ಎನ್.ಎಸ್.ಬೋಸರಾಜು ಪಕ್ಷದ ಅಭ್ಯರ್ಥಿ ಗೆಲುವಿಗೆ ಟೊಂಕಕಟ್ಟಿ ನಿಂತಿರುವುದು ಮತ್ತಷ್ಟು ಬಲ ಬಂದಂತಾಗಿದೆ. ರಾಜಾ ಅಮರೇಶ್ವರ ನಾಯಕರು ಕಳೆದ ಐದು ವರ್ಷಗಳಲ್ಲಿ ಮಾಡಿದ ಸಾಧನೆ ಮುಂದಿಟ್ಟುಕೊಂಡು ಪ್ರಚಾರ ನಡೆಸುತ್ತಿದ್ದಾರೆ. ಜತೆಗೆ ಸ್ಥಳೀಯ ಎನ್ನುವ ಟ್ರಂಪ್​ಕಾರ್ಡ್ ಬಳಸುತ್ತಿದ್ದಾರೆ. ಜಿ.ಕುಮಾರನಾಯಕ ಕ್ಷೇತ್ರದ ಹೊರಗಿನವರಾಗಿದ್ದರೂ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದನ್ನು ಮುಂದಿಟ್ಟುಕೊಂಡು ಜನರ ಮನವೊಲಿಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ನಡೆಸುತ್ತಿದ್ದು, ಪಕ್ಷದ ನಾಯಕರು ಭಿನ್ನಮತ ಮರೆತು ಒಂದಾಗಿದ್ದಾರೆ. ಬಿಜೆಪಿ ಮತ್ತೊಮ್ಮೆ ಮೋದಿ ಪ್ರಧಾನಿ ಎನ್ನುವ ಘೊಷವಾಕ್ಯದೊಂದಿಗೆ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ ತೊಡಗಿದೆ. ಕ್ಷೇತ್ರದ ಇತಿಹಾಸದಲ್ಲಿ 17 ಚುನಾವಣೆಗಳಲ್ಲಿ 10 ಬಾರಿ ನಾಯಕ ಸಮುದಾಯ ದವರು ಗೆಲುವು ಸಾಧಿಸಿದ್ದು, ಕ್ಷೇತ್ರ ಎಸ್ಟಿಗೆ ಮೀಸಲಾಗುವ ಮುಂಚೆಯೂ ನಾಯಕ ಸಮುದಾಯದವರಿಗೆ ಕ್ಷೇತ್ರದ ಮತದಾರರು ಮಣೆ ಹಾಕಿದ್ದಾರೆ.
ಭಿನ್ನಮತ ಶಮನ:ಬಿಜೆಪಿಯಲ್ಲಿ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕಗೆ ಪುನಃ ಟಿಕೆಟ್ ಘೊಷಣೆ ನಂತರದಲ್ಲಿ ಮತ್ತೊಬ್ಬ ಆಕಾಂಕ್ಷಿ ಮಾಜಿ ಸಂಸದ ಬಿ.ವಿ.ನಾಯಕ ಬಂಡಾಯವೆದ್ದಿದ್ದರು. ರಾಜ್ಯ ಉಸ್ತುವಾರಿ ಡಾ.ರಾಧಾಮೋಹನದಾಸ್ ಅಗರವಾಲ್ ಮನವೊಲಿಸಿದ ನಂತರದಲ್ಲಿ ಪಕ್ಷದ ಕಾರ್ಯಕ್ರಮಕ್ಕೆ ಆಗಮಿಸಿದರು. ಆದರೆ ಬಿ.ವಿ.ನಾಯಕ ಬೆಂಬಲಿಗರಲ್ಲಿ ಟಿಕೆಟ್ ನೀಡದಿರುವ ಆಕ್ರೋಶ ಮಡುಗಟ್ಟಿದೆ.
ಮಹಿಳೆಯರು ನಿರ್ಣಾಯಕ:ಕ್ಷೇತ್ರದಲ್ಲಿ ಒಟ್ಟು 19.93 ಲಕ್ಷ ಮತದಾರರಲ್ಲಿ 10.05 ಲಕ್ಷದಷ್ಟಿರುವ ಮಹಿಳೆಯರು ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಕ್ಷೇತ್ರ ಎಸ್ಟಿಗೆ ಮೀಸಲಾಗಿರುವುದರಿಂದ ನಾಯಕ ಸಮುದಾಯದ ಮತಗಳು ಹಂಚಿ ಹೋಗಲಿವೆ. ಲಿಂಗಾಯತ, ಪಜಾತಿ ಮತ್ತು ಒಬಿಸಿ ಮತಗಳು ಪ್ರಾಮುಖ್ಯ ಪಡೆಯುತ್ತವೆ. ಹೆಚ್ಚಿನ ಸಂಖ್ಯೆಯ ಯುವ ಮತದಾರರು ನಿರ್ಣಾಯಕರಾಗಿದ್ದಾರೆ.
1. ಪ್ರಧಾನಿ ನರೇಂದ್ರ ಮೋದಿ ಅಲೆ
2. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ
3. ಐದು ವರ್ಷಗಳಲ್ಲಿ ಮಾಡಿದ ಕೆಲಸ,
4. ಉತ್ತಮ ವ್ಯಕ್ತಿತ್ವ
5. ಕಾರ್ಯಕರ್ತರಲ್ಲಿರುವ ಅಸಮಾಧಾನ
6. ಎಸ್ಟಿ ಪ್ರಮಾಣಪತ್ರದ ಬಗ್ಗೆ ಎದ್ದಿರುವ ಗೊಂದಲ
1. ಗ್ಯಾರಂಟಿ ಯೋಜನೆಗಳು
2. ಕ್ಷೇತ್ರದ ಐದು ವಿಧಾನಸಭೆ ಕ್ಷೇತ್ರಗಳು ಕೈವಶದಲ್ಲಿರುವುದು
3. ಪಕ್ಷದ ನಾಯಕರು ಭಿನ್ನಮತ ಮರೆತು ಪ್ರಚಾರದಲ್ಲಿ ತೊಡಗಿರುವುದು
4. ಹೊಸ ಮುಖ, ಕ್ಷೇತ್ರದ ಹೊರಗಿನವರು ಎನ್ನುವ ಮಾತು
5. ರಾಜಕೀಯ ಅನುಭವದ ಕೊರತೆ
ಕಳೆದ ಐದು ವರ್ಷಗಳಲ್ಲಿ ಕ್ಷೇತ್ರಕ್ಕೆ ತಂದ ಅನುದಾನ, ಅಭಿವೃದ್ಧಿ ಕಾರ್ಯಗಳು ಶ್ರೀರಕ್ಷೆಯಾಗಿವೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎನ್ನುವುದು ಜನರ ಅಭಿಲಾಷೆಯಾಗಿದ್ದು, ಕಳೆದ ಬಾರಿಗಿಂತ ಹೆಚ್ಚಿನ ಮತಗಳ ಅಂತರದಿಂದ ಮತದಾರರು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸವಿದೆ.
| ರಾಜಾ ಅಮರೇಶ್ವರ ನಾಯಕ ಬಿಜೆಪಿ ಅಭ್ಯರ್ಥಿ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಜನರು ಕಾಂಗ್ರೆಸ್​ನತ್ತ ಒಲವು ತೋರುತ್ತಿದ್ದಾರೆ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದರಿಂದ ಸಮಸ್ಯೆಗಳ ಬಗ್ಗೆ ಅರಿವಿದೆ. ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಕೆಲಸ ಮಾಡಲು ಆಶೀರ್ವಾದ ನೀಡುವ ಭರವಸೆಯಿದೆ.
| ಜಿ.ಕುಮಾರ ನಾಯಕ, ಕಾಂಗ್ರೆಸ್ ಅಭ್ಯರ್ಥಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − six =
Remember me
