ಕಲಬುರಗಿ:ಬಿಜೆಪಿ ಕಾರ್ಯಕರ್ತನೊಬ್ಬ ಸಾವಿಗೆ ಶರಣಾಗಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಶಿರೋಳ್ಳಿ ಗ್ರಾಮದಲ್ಲಿ ನಡೆದಿದ್ದು, ಕಾಂಗ್ರೆಸ್​ ಕಾರ್ಯಕರ್ತರ ವಿರುದ್ಧ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.
ಶಿವಕುಮಾರ್ ಮೃತ ದುರ್ದೈವಿ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಕುಮಾರ್ ಸಂಬಂಧಿ ನರಸಪ್ಪ ಎಂಬುವರ ಹೊಲಕ್ಕೆ ಹೋಗಿ ಕಾಂಗ್ರೆಸ್​ ಕಾರ್ಯಕರ್ತರು ಹಲ್ಲೆ ಮಾಡಿದ್ದರು. ಇದರಿಂದ ಬೇಸತ್ತು ಶಿವಕುಮಾರ್​ ಸಾವಿನ ಹಾದಿ ಹಿಡಿದಿದ್ದಾರೆ ಎಂದು ಹೇಳಲಾಗಿದೆ.
ಇದಿಷ್ಟೇ ಅಲ್ಲದೆ, ಆತ್ಮಹತ್ಯೆಗೂ ಮುನ್ನ ಶಿವಕುಮಾರ್​ ಮೂರು ಆಡಿಯೋ ರೇಕಾರ್ಡ್ ಮಾಡಿದ್ದು, ತನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ನೇರ ಕಾರಣ ಅಂತ ಆರೋಪ ಮಾಡಿದ್ದಾರೆ.
ಇದನ್ನೂ ಓದಿ:‘ನಾನು ಬ್ರೂಸ್ ಲೀ ತಂಗಿ ಚೂಸ್ಲಿ’ ಎಂದ ರಾಖಿ ಸಾವಂತ್; ​​ರಾಜ್​ ಕುಂದ್ರಾ ರೀತಿ ಮಾಸ್ಕ್​​​ ಧರಿಸಿದ್ದು ಯಾಕೆ..?
ನಾನು ಹಿಂದು ಹುಲಿಯಾಗಿದ್ದೇನೆ ಮತ್ತು ಹಿಂದು ಹುಲಿಯಾಗಿಯೇ ಸಾಯುತ್ತೇನೆ. ನಾನು ಹಿಂದು ಧರ್ಮದ ಬಗ್ಗೆ ಎಲ್ಲಿಯೂ ಮಾತಾಡಬಾರದು, ಮಾತಾಡಿದರೆ ಇವರ ಹೊಟ್ಟೆ ಬೆಂಕಿ ಬೀಳುತ್ತೆ. ಹೀಗಾಗಿ ನನ್ನ ಸಾವಿಗೆ ಕಾಂಗ್ರೆಸ್ ಕಾರ್ಯಕರ್ತರು, ಸಚಿವ ಶರಣಪ್ರಕಾಶ್ ಪಾಟೀಲ್ ಕಾರಣ ಎಂದು ಶಿವಕುಮಾರ್​ ಗಂಭೀರ ಆರೋಪ ಮಾಡಿದ್ದಾರೆ.
ರೆಕಾರ್ಡ್​ ಮಾಡಿದ ಮೂರು ಆಡಿಯೋವನ್ನು ಆಪ್ತ ವಲಯಕ್ಕೆ ಕಳುಹಿಸಿ ಶಿವಕುಮಾರ್​ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದೀಗ ಕಲಬುರಗಿಯಲ್ಲಿ ಈ ಪ್ರಕರಣ ಭಾರೀ ಸಂಚಲನ ಮೂಡಿಸಿದ್ದು, ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಈ ಸಂಬಂಧ ಸುಲೆಪೇಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿಸಿಎಂ ಡಿಕೆಶಿಗೆ ಬಿಗ್​ ಶಾಕ್​: ಸಿಬಿಐ ದಾಖಲಿಸಿ FIR​ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​

VIDEO | ನವರಾತ್ರಿ ಆಚರಣೆ ವೇಳೆ ಇದ್ದಕ್ಕಿದ್ದಂತೆ ನಿಂತ ಜೈಂಟ್ ವೀಲ್ಹ್​​​; ಸಿಲುಕಿಕೊಂಡ 50 ಮಂದಿ..ಮುಂದೇನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
