ಕಲಬುರಗಿ:‌ಮಹಾಮಾರಿಯಂತೆ ಕಾಡುತ್ತಿರುವ ಕರೊನಾ ಸೋಂಕಿಗೆ ಕಲಬುರಗಿ ನಗರದಲ್ಲಿ ಮತ್ತೊಂದು ಬಲಿಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿದರೆ, ರಾಜ್ಯದಲ್ಲಿ ಸತ್ತವರ ಸಂಖ್ಯೆ 17 ಆದಂತಾಗಿದೆ.
ಕಲಬುರಗಿಯಲ್ಲಿ 80 ವರ್ಷದ ವೃದ್ದ ಮೃತಪಟ್ಟಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದರು. ನಿನ್ನೆ ಗಂಟಲು‌ ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ನಿನ್ನೆ ಆತ ಮೃತಪಟ್ಟಿದ್ದಾನೆ.‌ ಮೃತ ವೃದ್ದನಿಗೆ ಸೋಂಕು ಇತ್ತು ಎಂದು ವೈದ್ಯಕೀಯ ಶಿಕ್ಷಣ ಸಚಿವ‌ ಡಾ.ಸುಧಾಕರ್‌ ಟ್ವೀಟ್ ಮಾಡಿದ್ದಾರೆ.
ಇಎಸ್ಐಸಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ನೀಡಲಾಗುತ್ತಿತ್ತು. ವಯೋಸಹಜ ಕಾಯಿಲೆಗಳ ಜತೆಗೆ ಆತನಿಗೆ ಕರೊನಾ ಕಂಡು ಬಂದಿತು. ಈ ವೃದ್ಧ ದೆಹಲಿ ಜಮಾತ್​ಗೆ ಹೋಗಿ ಬಂದವರ ನೇರ ಸಂಪರ್ಕದಲ್ಲಿ ಇದ್ದ ಎಂದು ತಿಳಿದುಬಂದಿದೆ.
ಕಲ್ಪುರ್ಗಿಯಲ್ಲಿ ಕಳೆದ 3 ವರ್ಷಗಳಿಂದ ಪಾರ್ಕಿನ್ಸನ್ ನಿಂದ ಬಳಲುತ್ತಿದ್ದ 80 ವರ್ಷದ ಹಿರಿಯರು ನಿನ್ನೆ ಸಾವನ್ನಪಿದ್ದಾರೆ. ಮೊನ್ನೆ ಜ್ವರ ಇದ್ದುದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿನ್ನೆ ಬೆಳಗ್ಗೆ 9 ಗಂಟೆಗೆ ಅವರು ವಿಧಿವಶರಾಗಿದ್ದಾರೆ. ನಿನ್ನೆ ರಾತ್ರಿ 9ಕ್ಕೆ ಮೃತರ ವರದಿ ಬಂದಿದ್ದು,#COVID19ಪಾಸಿಟಿವ್ ಇದ್ದದ್ದು ತಿಳಿದುಬಂದಿದೆ.
— Dr Sudhakar K (@mla_sudhakar)April 21, 2020

ಪಾದರಾಯನಪುರ ಪುಂಡರಿಂದ ಕರೊನಾ ಮುಕ್ತ ರಾಮನಗರಕ್ಕೂ ಶುರುವಾಯ್ತು ಆತಂಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + fifteen =
Remember me
