ಕಲಬುರಗಿ:ಇಂದು(ಮಂಗಳವಾರ) ಬೆಳಗ್ಗೆ ಪ್ರಾರ್ಥನೆ ಮುಗಿಸಿ ತರಗತಿಯ ಕೊಠಡಿಗೆ ಮಕ್ಕಳು ಬರುತ್ತಿದ್ದಂತೆ ಶಾಲೆಯ ಗೋಡೆ ಕುಸಿದಿದ್ದು, ಮಕ್ಕಳು ಚೀರಾಡುತ್ತಾ ಭಯದಲ್ಲೇ ಹೊರಗೆ ಓಡಿ ಬಂದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಆನೂರದಲ್ಲಿ ಸಂಭವಿಸಿದೆ.
ಅದೃಷ್ಟವಶಾತ್ ಪ್ರಾಣಾಪಯದಿಂದ ವಿದ್ಯಾರ್ಥಿಗಳು ಪಾರಾಗಿದ್ದಾರೆ. ಮಕ್ಕಳು ಬೆಂಚಿನ ಬಳಿ ಕೂತಿದ್ದರೆ ಭಾರೀ ಅನಾಹುತವೇ ಸಂಭವಿಸುತ್ತಿತ್ತು. ಜಾಗದಲ್ಲಿ ಕೂರಲು ಅರೆಕ್ಷಣ ತಡವಾಗಿದ್ದರಿಂದ ಅಪಾಯ ತಪ್ಪಿದೆ.

ಆನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 12 ಕೊಠಡಿಗಳ ಪೈಕಿ 8 ಕೊಠಡಿ ಶಿಥಿಲಾವಸ್ಥೆಯಿಂದ ಕೂಡಿವೆ. ಹೊಸ ಕಟ್ಟಡ ನಿರ್ಮಾಣ ಆಗಬೇಕೆಂದು ಶಿಕ್ಷಣ ಇಲಾಖೆಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಆದರೂ ಇನ್ನೂ ಕ್ರಮ ಕೈಗೊಂಡಿಲ್ಲ. ಮಕ್ಕಳ ಪ್ರಾಣದ ಜತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
7 ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಯುವತಿ ಗಂಡನ ಮನೆಯಲ್ಲಿ ದುರಂತ ಅಂತ್ಯ!

ಗೆಸ್ಟ್​ ಹೌಸ್​ನ ಹಾಸಿಗೆ, ಮಂಚ, ಯೋಗ ಮ್ಯಾಟ್… ಡಿಸಿ ನಿವಾಸಕ್ಕೆ ಶಿಫ್ಟ್​: ಹಿಂತಿರುಗಿಸುವಂತೆ ಪತ್ರ ಬರೆದರೂ ರೋಹಿಣಿ ಸಿಂಧೂರಿ ಮೌನ!

ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ! ಹುಬ್ಬಳ್ಳಿಯಲ್ಲಿ ಖ್ಯಾತ ಉದ್ಯಮಿ ಪುತ್ರನ ಬದುಕು ದುರಂತ ಅಂತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
