ಕಲಬುರಗಿ:ಜಿಲ್ಲೆಗೆ ಫೆಬ್ರವರಿ 27ರಿಂದ ಮಾರ್ಚ್​​ 3ರವರೆಗೆ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್​​ ಮುತಾಲಿಕ್​​ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರಿಗೆ ಸಿ‌ಆರ್​​ಪಿ‌ಸಿ ಕಾಯ್ದೆ-1973ರ ಕಲಂ-132, 143, 144 ಹಾಗೂ 144ಎ ಅನ್ವಯ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಯಶವಂತ‌ ಗುರುಕರ್ ಆದೇಶ ಹೊರಡಿಸಿದ್ದಾರೆ.
ಇದಲ್ಲದೇ ಜೇವರ್ಗಿ ತಾಲೂಕಿನ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಸಹ ಫೆ. 27ರಿಂದ ಮಾ.3ರವರೆಗೆ ಆಳಂದ ತಾಲೂಕು ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಶಿವರಾತ್ರಿ ನಿಮಿತ್ತ ಆಳಂದ ಪಟ್ಟಣದ ಲಾಡ್ಲೆ‌ ಮಶಾಕ್ ದರ್ಗಾದಲ್ಲಿ‌ರುವ ರಾಘವ ಚೈತನ್ಯ ಶಿವಲಿಂಗದ ಶುದ್ಧೀಕರಣ ಕಾರ್ಯಕ್ರಮಕ್ಕೆ ಸಿದ್ದಲಿಂಗ‌ ಸ್ವಾಮೀಜಿ ತಿಳಿಸಿದ್ದಾರೆ. ಅಲ್ಲದೆ ಫೆ. 27ಕ್ಕೆ ಆಳಂದ‌ ಚಲೋಗೆ ಕರೆ‌ ನೀಡಿದ್ದಾರೆ. ಹಿಂದೆ ಕಿಡಿಗೇಡಿಗಳು ಈ ಶಿವಲಿಂಗಕ್ಕೆ ಮಲಮೂತ್ರ ಎಸಗಿ ಅಪಚಾರಗೊಳಿಸಿದ್ದರು.
ಆದರೆ, ಲಾಡ್ಲೆ‌ ಮಶಾಕ್ ದರ್ಗಾದಲ್ಲಿ‌ ಮಾರ್ಚ್ 01ರಂದು ಸಂದಲ್ ಮತ್ತು ಶಬ್-ಏ-ಬರಾತ್ ಕಾರ್ಯಕ್ರಮ ಕೂಡ ಇದೆ. ಹೀಗಾಗಿ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವ ಕಾರಣ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಅಲ್ಲದೇ ಮುಂಜಾಗ್ರತ ಕ್ರಮವಾಗಿ ಆಳಂದ ಪಟ್ಟಣದ್ಯಾಂತ ನಾಳೆಯಿಂದ ಐದು ದಿನಗಳ ಕಾಲ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಪತ್ನಿ ನಾಪತ್ತೆ, ಗಂಡನ ಫೇಸ್​ಬುಕ್​ನಲ್ಲಿ ಶ್ರದ್ಧಾಂಜಲಿ ಪೋಸ್ಟ್​! ಅಬ್ಬಬ್ಬಾ ದೊಡ್ಡಬಳ್ಳಾಪುರದಲ್ಲಿ ಇದೆಂಥಾ ಹೈಡ್ರಾಮ?
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:five × 3 =
Remember me
