ಕಲಬುರಗಿ:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು (ಅ. 21) ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಂಡರು.
ಬಳ್ಳಾರಿಯ ತೋರಣಗಲ್​ನಿಂದ ಹೆಲಿಕ್ಯಾಪ್ಟರ್​ನಲ್ಲಿ ಹೊರಟ ಸಿಎಂ ಬಿಎಸ್​ವೈ, ಭಾರಿ ಮಳೆಯಿಂದ ಉಂಟಾದ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.
ಇದನ್ನೂ ಓದಿ:ಟ್ವೀಟ್​ ಮೂಲಕ ಮತ್ತೊಮ್ಮೆ ಗುಡುಗಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​..!
ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಹಲವು ಪ್ರದೇಶಗಳು ಪ್ರವಾಹದ ಹೊಡೆತಕ್ಕೆ ಸಿಲುಕಿವೆ. ಅಪಾರ ಬೆಳೆ ಹಾನಿ ಸಂಭವಿಸಿದ್ದು, ಅಲ್ಲಲ್ಲಿ ಮನೆ ಕುಸಿತ ಪ್ರಕರಣಗಳು ವರದಿಯಾಗಿವೆ. ಎರಡು ದಿನಗಳ ಹಿಂದಷ್ಟೇ ಕಂದಾಯ ಸಚಿವ ಆರ್​. ಅಶೋಕ್​ ಅವರು ಪ್ರವಾಸ ಮಾಡಿದ್ದರು.
ಇಂದು ಸಿಎಂ ಬಿಎಸ್​ವೈ ವೈಮಾನಿಕ ಸಮೀಕ್ಷೆ ನಡೆಸಿದ್ದು, ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಿರಾ ಬೈ ಎಲೆಕ್ಷನ್​ಗೆ ಎಚ್​.ಡಿ.ದೇವೇಗೌಡ ಎಂಟ್ರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
