ಕಲಬುರಗಿ:ಕನ್ನಡ ರಾಜ್ಯೋತ್ಸವ ದಿನದಂದೇ ಪ್ರತ್ಯೇಕ ಕರ್ನಾಟಕ ಕೂಗು ಕೇಳಿಬಂದಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಇಂದು (ನ.1) ಪ್ರತಿಭಟನೆ ನಡೆಸುತ್ತಿದೆ.
ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟಿಸಿದ್ದಲ್ಲದೆ, ಕಲಬುರಗಿಯ ಎಸ್​ವಿಪಿ ವೃತ್ತದಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದವರನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ನಗರದ ಜಿಲ್ಲಾ ನ್ಯಾಯಾಲಯದಿಂದ ಎಸ್​ವಿಪಿ ವೃತ್ತದವರೆಗೆ ಮೆರವಣಿಗೆ ಮೂಲಕ ತೆರಳಿ ಪ್ರತ್ಯೇಕ ಧ್ವಜಾರೋಹಣಕ್ಕೆ ಸಮಿತಿಯ ಸದಸ್ಯರು ಮುಂದಾದರು. ಈ ವೇಳೆ 15 ಕ್ಕೂ ಹೆಚ್ಚು ಹೋರಾಟಗಾರರನ್ನು ಬಂಧಿಸಿ ಪೊಲೀಸರು ಕರೆದೊಯ್ದಿದ್ದಾರೆ.
ರಾಜ್ಯ ಸರ್ಕಾರದಿಂದ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಆರೋಪಗಳು ಕೇಳಿಬಂದಿದೆ. ಕೆಕೆಆರ್​ಡಿಬಿ ಅನುದಾನವನ್ನು ಕಲ್ಯಾಣ ಕರ್ನಾಟಕ ಹೊರತುಪಡಿಸಿದ ಜಿಲ್ಲೆಗಳಿಗೆ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಅನ್ಯಾಯ ಮಾಡಿದೆ ಎಂದು ಹೋರಾಟ ಸಮಿತಿ ಆಕ್ರೋಶ ಹೊರಹಾಕಿದೆ.
ಪ್ರತಿಭಟನಾಕಾರರು ದಿವಗಂಥ ವೈಜನಾಥ್ ಪಾಟೀಲ್ ಹಾಗೂ ಉಮೇಶ್ ಕತ್ತಿ ಅವರ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದರು.(ದಿಗ್ವಿಜಯ ನ್ಯೂಸ್​)
ಲವ್​ ಬ್ರೇಕಪ್​ಗೆ ಒಪ್ಪದ ಪ್ರಿಯಕರನಿಗೆ ವಿಷವುಣಿಸಿದ ಪ್ರೇಯಸಿ! ಸಾಯೋ ಮುನ್ನ ಯುವಕ ಆಡಿದ ಮಾತು ಮನಕಲಕುವಂತಿದೆ

ಮೊರ್ಬಿ ಸೇತುವೆ ಕುಸಿತ ಪ್ರಕರಣ: ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 141ಕ್ಕೆ ಏರಿಕೆ, 9 ಜನರ ಬಂಧನ

ಹೊಸಬರ ‘ಅಲೆಗಳಿಲ್ಲದ ಸಾಗರ’; ನಿರ್ದೇಶಕ ಸಾಗರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 2 =
Remember me
