ಕಲಬುರಗಿ:ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಸಂಗಾಪುರದಲ್ಲಿ ನಡೆದಿದೆ.
ಭಾಗ್ಯಮ್ಮ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ. ದ್ರಾಕ್ಷಾಯಿಣಿ (2 ವರ್ಷ), ಪ್ರೇಮಾ‌ (2 ತಿಂಗಳು) ಮೃತಪಟ್ಟ ಮಕ್ಕಳು. ನಿನ್ನೆ ಮಧ್ಯಾಹ್ನ ಭಾಗ್ಯಮ್ಮ ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನ ಕಂಡ ಗ್ರಾಮಸ್ಥರು ಬಾವಿಗೆ ಹಾರಿ ರಕ್ಷಣೆ ಮಾಡುವಷ್ಟರಲ್ಲಿ ಮಕ್ಕಳು ಸಾವನ್ನಪ್ಪಿದ್ದಾರೆ. ಗ್ರಾಮಸ್ಥರಿಂದ ತಾಯಿ ಭಾಗ್ಯಮ್ಮಳ ರಕ್ಷಣೆ ಮಾಡಲಾಗಿದೆ.
ಆತ್ಮಹತ್ಯೆಗೆ ಯತ್ನಿಸಿರುವ ವಿಷಯವನ್ನ ಮುಚ್ಚಿಟ್ಟ ಕುಟುಂಬಸ್ಥರು ಮಕ್ಕಳ ಅಂತ್ಯ ಸಂಸ್ಕಾರ ಮಾಡಿದ್ದಾರೆ. ಭಾಗ್ಯಮ್ಮಳನ್ನು ಚಿಕಿತ್ಸೆಗಾಗಿ ಇಂದು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡುವಾಗ ಪೊಲೀಸರಿಗೆ ವಿಷಯ ಗೊತ್ತಾಗಿದೆ. ಈ ಸಂಬಂದ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೀವನದಲ್ಲಿ ರಾಕ್ಷಸರು ಬಂದ್ ಹೋಗ್ತಿರ್ತಾರೆ; ಸೂರ್ಯ ಸೂರ್ಯನೇ, ಚಂದ್ರ ಚಂದ್ರನೇ; ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ರಾ ಹೆಬ್ಬಾಳ್ಕರ್?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
