ಕಲಬುರಗಿ:ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ ಪ್ರಚಾರ ಮಾಡಿದ ಆರೋಪದ ಮೇಲೆ ಚಿತ್ತಾಪುರ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್​ನನ್ನು ಕಲಬುರಗಿಯ ಮಾಡಬೂಳ್​ ಠಾಣಾ ಪೊಲೀಸರು ಇಂದು (ಆ.23) ಬಂಧಿಸಿದ್ದಾರೆ.
ಮಣಿಕಂಠ ರಾಠೋಡ್, ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಿಂದ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿ ಸೋತಿದ್ದಾರೆ. ಇಂದು ಮುಂಜಾನೆ ಕಲಬುರಗಿ ನಗರದ ಅಪಾರ್ಟ್ಮೆಂಟ್​ನಿಂದ ಬಂಧಿಸಿ ರಾಠೋಡ್​ರನ್ನು ಕರೆದುಕೊಂಡು ಹೋಗಿದ್ದಾರೆ.
ಮಣಿಕಂಠ ರಾಠೋಡ್ ವಿರುದ್ಧ, ಚಿತ್ತಾಪುರ ತಾಲೂಕಿನ ಮಾಡಬೂಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ತಪ್ಪು ಸಂದೇಶ ಪ್ರಚಾರ ಮಾಡಿದ ಆರೋಪದ ಮೇಲೆ ಐಪಿಸಿ ಸೆಕ್ಷನ್ 153 ಎ, 505(1)ಬಿ ಅಡಿ ಕೇಸ್ ದಾಖಲಾಗಿತ್ತು.
ಇದನ್ನೂ ಓದಿ:ಪ್ರತಿದಿನ ಕೇವಲ 1 ಗಂಟೆ ಕೆಲಸಕ್ಕೆ ಈ ಟೆಕ್ಕಿ ಪಡೆಯುತ್ತಿರುವ ಸಂಬಳ ಕೇಳಿದ್ರೆ ಬೆರಗಾಗೋದು ಖಂಡಿತ!
ಚಿತ್ತಾಪುರ ತಾಲೂಕಿನ ಕಲಗುರ್ತಿ ಗ್ರಾಮದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡು ತಿಂಗಳಾಗಿದೆ. ಈ ಪ್ರಕರಣದ ಆರೋಪಿಗಳು ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರು ಮತ್ತು ಆರೋಪಿಗಳನ್ನು ಪೊಲೀಸರು ಬಂಧಿಸುತ್ತಿಲ್ಲ. ಪೊಲೀಸರು ಸಚಿವ ಪ್ರಿಯಾಂಕ್ ಖರ್ಗೆ ಕೈಗೊಂಬೆಯಾಗಿದ್ದಾರೆ ಅಂತ ರಾಠೋಡ್​ ಆರೋಪಿಸಿದ್ದಾರೆ.
ಈ ಬಗ್ಗೆ ಇಂದು ಚಿತ್ತಾಪುರ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಜನರಿಗೆ ತಪ್ಪು ಸಂದೇಶ ರವಾನೆ ಮಾಡುತ್ತಿದ್ದಾರೆ ‌ಅಂತ ಆರೋಪಿಸಿ ಮಣಿಕಂಠ ರಾಠೋಡ್​ನನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.(ದಿಗ್ವಿಜಯ ನ್ಯೂಸ್​)
ಮದುವೆ ನೆಪದಲ್ಲಿ ಯವತಿಯೊಂದಿಗೆ ಸಂಪರ್ಕ ಬೆಳೆಸಿ ಯುವಕ ಪರಾರಿ: ಕೊನೆಗೆ ಗೊತ್ತಾಯ್ತು ಆತ ಅಮರ್​ ಅಲ್ಲ, ಅಮೀರ್ ಎಂದು​..

ಉತ್ತರ ಪತ್ರಿಕೆಯಲ್ಲಿ ನೋಟುಗಳನ್ನಿಟ್ಟು ಪಾಸ್​ ಮಾಡುವಂತೆ ಶಿಕ್ಷಕರ ಬಳಿ ಮನವಿ ಮಾಡಿದ ವಿದ್ಯಾರ್ಥಿಗಳು!

ಸರ್ವಪಕ್ಷ ಸಭೆ; ರಾಜ್ಯದ ಹಿತರಕ್ಷಣೆ ವಿಷಯದಲ್ಲಿ ರಾಜಿ ಇಲ್ಲವೆಂದ ಸರ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 7 =
Remember me
