ಕಲಬುರಗಿ:ಗಂಡನ ಕಿರುಕುಳ ಸಹಿಸಲಾಗದೇ ಸ್ಟಾಫ್​ ನರ್ಸ್​ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿಯ ಶಿವಾಜಿನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಇಂದಿರಾ (38) ಮೃತ ಸ್ಟಾಫ್​ ನರ್ಸ್​. ಸೇಡಂ ತಾಲ್ಲೂಕಿನ ಆಯುಷ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಗುರುವಾರ ತಡರಾತ್ರಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದಿರಾ, ರಾಯಚೂರು ಮೂಲದ ಸಂಜೀವ್ ರೆಡ್ಡಿ ಎಂಬುವರನ್ನು 2002ರಲ್ಲಿ ಮದುವೆ ಆಗಿದ್ದರು. ಸಿವಿಲ್ ಕಾಂಟ್ರ್ಯಾಕ್ಟರ್ ಆಗಿರುವ ಸಂಜೀವ್ ರೆಡ್ಡಿ, ಹಣಕ್ಕಾಗಿ ನಿರಂತರವಾಗಿ ಇಂದಿರಾಗೆ ಕಿರುಕುಳ ನೀಡುತ್ತಿದ್ದ. ಇದನ್ನು ಸಹಿಸದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಶಿವಾಜಿನಗರ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಕನ್ನಡ ಭಾಷೆಯ ಪ್ರಾಚೀನತೆ, ಅನನ್ಯತೆ: ನರಹಳ್ಳಿ ಬಾಲಸುಬ್ರಹ್ಮಣ್ಯ
ಗಟ್ಟಿಗೊಂಡ ಕನ್ನಡದನಿ; ಜಾಲತಾಣಗಳ ಅಧ್ವಾನಕ್ಕೆ ಅಂಕುಶ ಬೇಕು..
PHOTO | ಕ್ರಿಕೆಟ್ ಜನಕರ ನಾಡಿನಲ್ಲಿ ಟೀಮ್ ಇಂಡಿಯಾ ಕ್ವಾರಂಟೈನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 7 =
Remember me
