ಹುಬ್ಬಳ್ಳಿ:ಧಾರವಾಡ ಜಿಲ್ಲೆಯ ಕಲಘಟಗಿ ಶಾಸಕ ಸಿ.ಎಂ.ನಿಂಬಣ್ಣವರ ಪುತ್ರನ ಕಾರಿನ ಮೇಲೆ ದಾಳಿ ನಡೆದಿದೆ.
ಭಾನುವಾರ ರಾತ್ರಿ ಕಾರಿನಲ್ಲಿ ಶಾಸಕರ ಪುತ್ರ, ಬಿಜೆಪಿ ಮುಖಂಡ ಶಶಿಧರ ನಿಂಬಣ್ಣವರ ಬರುತ್ತಿದ್ದರು. ಆ ವೇಳೆ ಕಾರನ್ನು ಅಡ್ಡಗಟ್ಟಿದ ಸಂಬಂಧಿಕರು ಕಾರಿನ ಮೇಲೆ ಕಲ್ಲು ತೂರಿದ್ದಾರೆ.ಇದನ್ನೂ ಓದಿರಿಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ
ಶಶಿಧರ ನಿಂಬಣ್ಣವರ, ನಾಗರಾಜ ಹನುಮಂತಪ್ಪ ನಿಂಬಣ್ಣವರ, ರಾಜೇಂದ್ರ ಸುರೇಶ ಜಾಯನಗೌಡರ ಅವರು ಸಂಗೆದೇವರಕೊಪ್ಪದಲ್ಲಿರುವ ಹೊಲಕ್ಕೆ ಹೋಗಿದ್ದರು. ವಾಪಸ್​ ‌ಮಾರುತಿ-800 ಕಾರಿನಲ್ಲಿ‌ ಮನೆಗೆ ಬರುವಾಗ, ಅಡ್ಡಗಟ್ಟಿದ ಸಂಬಂಧಿಕರು ಜಮೀನಿನ ವಿಚಾರವಾಗಿ ಇದ್ದ ತಂಟೆಯ ಸಿಟ್ಟಿನಿಂದ ಕಾರಿನ ಗ್ಲಾಸ್ ಒಡೆದು ಹಾನಿ ಮಾಡಿದ್ದಾರೆ. ಅಲ್ಲದೆ ಜೀವ ಬೆದರಿಕೆಯನ್ನೂ ಹಾಕಿದದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ.
ಸಂಗೆದೇವರಕೊಪ್ಪ ಗ್ರಾಮದ ಶಂಕ್ರಪ್ಪ ಹನುಮಂತಪ್ಪ ನಿಂಬಣ್ಣವರ, ಮಹಾಂತೇಶ ಹನುಮಂತಪ್ಪ ‌ನಿಂಬಣ್ಣವರ ಹಾಗೂ ಸಂಗಮೇಶ ಹನುಮಂತಪ್ಪ ನಿಂಬಣ್ಣವರ ಅವರ ವಿರುದ್ಧ ನಾಗರಾಜ ಹನುಮಂತಪ್ಪ ನಿಂಬಣ್ಣವರ ಅವರು ಕಲಘಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕನ್ನಡ ಚಿತ್ರರಂಗದ ಪೋಷಕ ನಟ ಶನಿಮಹಾದೇವಪ್ಪ ವಿಧಿವಶ

ವರ್ಷಾಚರಣೆಗೆ ಕೇಕ್​ ಕತ್ತರಿಸುತ್ತಿದ್ದ ಯುವಕರ ಹಿಂದೆಯೇ ಹಾದುಹೋದ ದೆವ್ವ! ಭಯಾನಕ ವಿಡಿಯೋ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + twenty =
Remember me
