ಕಲಬುರಗಿ:ಬಹುಜನರ ಒತ್ತಾಸೆಯಂತೆ ಹೈದರಬಾದ್-ಕರ್ನಾಟಕ ಪ್ರದೇಶವನ್ನು “ಕಲ್ಯಾಣ ಕರ್ನಾಟಕ” ಎಂದು ಮರು ನಾಮಕರಣ ಮಾಡಲಾಗಿದ್ದು, ಈ ಭಾಗದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಅಭಿವೃದ್ಧಿಗೆ ಹೊಸ ಆಯಾಮವನ್ನೂ ಕೊಡ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಭರವಸೆ ನೀಡಿದರು.
ಅವರು ನಗರದ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜನೆಯಾಗಿದ್ದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾಗಿ, ರಾಷ್ಡ್ರಧ್ವಜಾರೋಹಣ ನೆರವೇರಿಸಿ, ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗಳ ಶಿಲನ್ಯಾಸ ಮತ್ತು ಲೋಕಾರ್ಪಣೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಮಾಡಿದ ಭಾಷಣದ ಸಾರ ಇಲ್ಲಿದೆ.
ಇದನ್ನೂ ಓದಿ:ಸರ್ಕಾರಿ ಸಿಬ್ಬಂದಿಗೂ ‘ಬೇಹು’ಬಲೆ; ಅಧಿಕಾರಿಗಳ ಮೇಲೂ ಚೀನಾ ರಹಸ್ಯ ಕಣ್ಣು
ಪ್ರಾದೇಶಿಕ ಅಸಮತೋಲನವನ್ನು ನಿವಾರಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ಸ್ಥಾಪನೆಗೊಂಡಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘವು ನಿಗದಿತ ಗುರಿ ಮುಟ್ಟುವಲ್ಲಿ ಸರ್ವರ ಸಹಕಾರದೊಂದಿಗೆ ಸಂಪೂರ್ಣ ಯಶಸ್ವಿಯಾಗುತ್ತದೆ ಎಂದು ನಾನು ನಂಬಿದ್ದೇನೆ. ಕಲ್ಯಾಣ ಕರ್ನಾಟಕ ಪ್ರಾಂತ್ಯದ ಅಭಿವೃದ್ಧಿಗೆ ಹೊಸ ಆಯಾಮ ನೀಡುವುದು ನಮ್ಮ ಸರ್ಕಾರದ ಪ್ರಮುಖ ಗುರಿಗಳಲ್ಲಿ ಒಂದಾಗಿದೆ. ಈ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಮಂಡಳಿ ಮತ್ತು ಸಂಘವು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಸಂತೋಷದ ವಿಚಾರ.
ಇದನ್ನೂ ಓದಿ:ಹೊಸ ಪಾರ್ಲಿಮೆಂಟ್ ಕಾಂಪ್ಲೆಕ್ಸ್ ನಿರ್ಮಾಣದ ಗುತ್ತಿಗೆ ಯಾರಿಗೆ?
ಕೃಷಿ, ಆರೋಗ್ಯ, ಶಿಕ್ಷಣ, ಸ್ವಯಂ ಉದ್ಯೋಗ, ಗ್ರಾಮ ಸಬಲೀಕರಣ, ಯುವ ಜನ ಹಾಗೂ ಮಹಿಳಾ ಸಬಲೀಕರಣ ಮತ್ತು ನೈತಿಕ ತತ್ವಗಳನ್ನು ಸಾಧಿಸಿ, ಕಲ್ಯಾಣ ಕರ್ನಾಟಕದ ಜನರ ಬದುಕಿನಲ್ಲಿ ಹೊಸ ಅಧ್ಯಾಯೊಂದನ್ನು ತೆರೆಯಕು ಸ್ಥಾಪಿಸಿರುವ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕøತಿಕ ಸಂಘಕ್ಕೆ 300 ಕೋ.ರೂ. ಮೊತ್ತ ಬಿಡುಗಡೆಗೆ ಅನುಮೋದನೆ ನೀಡಿ 100 ಕೋ‌ಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ಇದನ್ನೂ ಓದಿ:ಗೋಲ್ಡ್ ಸ್ಮಗ್ಲಿಂಗ್ ಕೇಸ್ ಎಡರಂಗ ಸರ್ಕಾರಕ್ಕೆ ಭಾರಿ ಮುಖಭಂಗ
ಮೂರು ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಕಲಬುರಗಿ, ಬೀದರ ಜಿಲ್ಲೆಗೆ ಉಪಯೋಗವಾಗುವ ಕೃಷಿ ಮತ್ತು ಕುಡಿಯುವ ನೀರಿನ ಯೋಜನೆ ಮತ್ತು ಕಾಗಿಣಾ ನದಿಗೆ ಹೊಂದಿಕೊಂಡು 10 ಏತ ನೀರಾವರಿ ಯೋಜನೆಯ ಕಾಮಗಾರಿಗೆ ಅನುಮೋದನೆ ನೀಡಲಾಗಿದ್ದು, ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು. ಇದರಿಂದ ಬೀದರ್ ಮತ್ತು ಕಲಬುರಗಿ ಜಿಲ್ಲೆಯ ರೈತರ ಲಕ್ಷಾಂತರ ಎಕರೆ ಭೂಮಿಗೆ ನೀರಿನ ಪೂರೈಕೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ.
ಇದನ್ನೂ ಓದಿ:ಹೆಬ್ಬಾವನ್ನೇ ಮಾಸ್ಕ್​ ಆಗಿ ಧರಿಸಿ ಬಸ್​ ಹತ್ತಿದ: ಹೌಹಾರಿಹೋದ ಪ್ರಯಾಣಿಕರು!
ರಾಯಚೂರು ಜಿಲ್ಲೆಯ ಗೋಲಪಲ್ಲಿಯಲ್ಲಿ 1,200 ಮೆಗಾ ವ್ಯಾಟ್ ಸಾಮಥ್ರ್ಯದ 10,000 ಕೋಟಿ ರೂ.ಗಳ ವೆಚ್ಚದಲ್ಲಿ ಜಲ ವಿದ್ಯುತ್ ಯೋಜನೆಯು ಪರಿಶೀಲನಾ ಹಂತದಲ್ಲಿದ್ದು, ನೆರೆ ರಾಜ್ಯದ ಜೊತೆ ಮಾತುಕತೆಯ ನಂತರ ಸೂಕ್ತ ಕ್ರಮವಹಿಸಲಾಗುವುದು.ಮುಂದಿನ ನಾಲ್ಕು ತಿಂಗಳ ಅವಧಿಯಲ್ಲಿ ಬಸವಕಲ್ಯಾಣದಲ್ಲಿ ಅನುಭವ ಕಲ್ಯಾಣ ಮಂಟಪ ನಿರ್ಮಾಣ ಕಾರ್ಯಾರಂಭ ಮಾಡಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ವ್ಯಾಪ್ತಿಗೊಳಪಡುವ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳು ಅತಿ ಹಿಂದುಳಿದ ಪ್ರದೇಶಗಳಾಗಿದ್ದು, ಈ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಸಾಧ್ಯವಾದ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಇದನ್ನೂ ಓದಿ:ಪೈಶಾಚಿಕ ಕೃತ್ಯ ಕಂಡು ಬೆಚ್ಚಿದ ಜನ: ಬೀದಿಯಲ್ಲೇ 18 ವರ್ಷದ ಮಗಳ ಕತ್ತು ಕೊಯ್ದ ಅಪ್ಪ!
ಇದಕ್ಕೂ ಮುನ್ನ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಎಸ್.ವಿ.ಪಿ. ವೃತ್ತದಲ್ಲಿರುವ ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಸಿ.ಎಂ.ಜೊತೆಗೆ ಉಪ ಮುಖ್ಯಮಂತ್ರಿಗಳು ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸಹ ಅಗಮನ. RC ಡಾ‌‌.ಎನ್.ವಿ.ಪ್ರಸಾದ, ಐ.ಜಿ.ಪಿ.ಮನೀಷ ಖರ್ಬಿಕರ್, DC ವಿ.ವಿ. ಜ್ಯೋತ್ಸ್ನಾ, ಪೊಲೀಸ್ ಆಯುಕ್ತ ಸತೀಶ ಕುಮಾರ, S P ಸಿಮಿ ಮರಿಯನ್ ಜಾರ್ಜ್ ಅವರು ಮುಖ್ಯಮಂತ್ರಿಗಳಿಗೆ ಹೂಗುಚ್ಚ ನೀಡಿ ಬರಮಾಡಿಕೊಂಡರು. ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಎನ್.ಇ‌.ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ, ಸಂಸದ ಡಾ. ಉಮೇಶ ಜಾಧವ್, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಶಾಸಕರಾದ ಬಸವರಾಜ್ ಮತ್ತಿಮೂಡ ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ತಿನ ಶಾಸಕರಾದ ಬಿ.ಜಿ. ಪಾಟೀಲ್, ಇದ್ದರು.
“ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿಯದ್ದು ಕರ್ಣನ ಪರಿಸ್ಥಿತಿ”

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
