ಮಂಗಳೂರು:ಕಪಾಲಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ಮಾಡುವುದನ್ನು ವಿರೋಧಿಸಿ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್​ ಭಟ್​ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಕನಕಪುರ ಚಲೋವನ್ನು ಮಾಜಿ ಸಚಿವ ಯು.ಟಿ.ಖಾದರ್​ ವಿರೋಧಿಸಿದ್ದಾರೆ.
ಕನಕಪುರ ಚಲೋ ಹಮ್ಮಿಕೊಂಡಿದ್ದು ಡಾ. ಕಲ್ಲಡ್ಕ ಪ್ರಭಾಕರ್​ ಭಟ್​ ಅವರ ಸಣ್ಣ ಮನಸು ತೋರಿಸುತ್ತದೆ. ದೇವರ ಪ್ರತಿಮೆ ನಿರ್ಮಾಣ ಮಾಡಲು ಅಡ್ಡಿಪಡಿಸುವ ಇವರ ಮನೋಭಾವಕ್ಕೆ ಏನು ಹೇಳಬೇಕು ಗೊತ್ತಾಗುತ್ತಿಲ್ಲ ಎಂದರು.ಶಾಂತಿ-ಸಂದೇಶ ಸಾರಲು ಏಸು ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ. ಕ್ರೈಸ್ತ ಸಮುದಾಯದವರ ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳು ಸಮಾಜಕ್ಕೆ ಪೂರಕವಾಗಿವೆ. ಕ್ರೈಸ್ತ ಸಮುದಾಯದವರು ಯಾವುದನ್ನೂ ಮಿಸ್​ ಯೂಸ್​ ಮಾಡುವುದಿಲ್ಲ.
ದೇಶಭಕ್ತಿ ಎಂದು ಹೇಳುವವರು ನಿರ್ಗತಿಕರನ್ನು ನೋಡುವುದಿಲ್ಲ ಎಂದು ಖಾದರ್​ ಹೇಳಿದರು.ಕಲ್ಲಡ್ಕ ಪ್ರಭಾಕರ್​ ಭಟ್​ ಕನಕಪುರದ ಸೋದರತೆ ಹಾಳು ಮಾಡುವ ಉದ್ದೇಶದಿಂದ ಅಲ್ಲಿಗೆ ಹೋಗಿದ್ದಾರೆ. ಇಲ್ಲಿಂದ ಅಲ್ಲಿಗೆ ಹೋಗಿ ಭಾಷಣ ಮಾಡುವ ಅಗತ್ಯ ಏನಿತ್ತು? ಕನಕಪುರ, ಬೆಂಗಳೂರಿನವರು ಆದರೂ ಶಾಂತಿ, ನೆಮ್ಮದಿಯಿಂದ ಇರಲಿ. ಇಲ್ಲಿ ನಾವು ನರಕ ಅನುಭವಿಸುತ್ತಿರುವುದು ಸಾಕು ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 10 =
Remember me
