
ಬೆಂಗಳೂರು:ಹೈದರಾಬಾದ್ ನಿಜಾಮನ ಆಡಳಿತದಿಂದ ವಿಮೋಚನಗೊಂಡ ದಿನವಾದ ಸೆಪ್ಟೆಂಬರ 17ರಂದು ಕಲ್ಯಾಣ ಕರ್ನಾಟಕ ಉತ್ಸವವನ್ನು ಜನೋತ್ಸವವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ.ವಿಕಾಸಸೌಧದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಣಯಿಸಲಾಗಿದ್ದು, ಜಿಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಜನಪ್ರತಿನಿಧಿಗಳೊಂದಿಗೆ ಕಲಬುರಗಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಸಭೆಯಲ್ಲಿ ಮಾತನಾಡಿದ ಸಚಿವರು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾರಣವಾದ 371 ಜೆ ಅಸ್ಥಿತ್ವಕ್ಕೆ ಬಂದು ಹತ್ತು ವರ್ಷಗಳು ಸಂದ ಸಂದರ್ಭದಲ್ಲಿ ದಶಮಾನೋತ್ಸವವನ್ನು ಆಚರಿಸುತ್ತಿರುವದರಿಂದ ಈ ಬಾರಿಯ ಉತ್ಸವವನ್ನು ಅರ್ಥಗರ್ಭಿತವಾಗಿ ಆಚರಿಸಲು ಕಾರ್ಯಕ್ರಮಗಳನ್ನು ರೂಪಿಸುವಂತೆಯೂ ಪಾಟೀಲ್ ಹೇಳಿದರು.ಸೆ.17ರಂದು ಮುಖ್ಯಮಂತ್ರಿಗಳು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.ಸ್ಥಳೀಯ ಪಾರಂಪರಿಕ ಜಾನಪದ ಕಲೆಗಳೊಂದಿಗೆ ಕರ್ನಾಟಕದ ವೈವಿಧ್ಯಮಯ ಜಾನಪದ ಕಲೆಗಳನ್ನು ಒಟ್ಟುಗೂಡಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರ ಪಡಿಸಲು ಅಧಿಕಾರಿಗಳಿಗೆ ಪಾಟೀಲ್ ಸೂಚಿಸಿದರು.ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಜಯ್‌ಸಿಂಗ್, ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಿ.ಆರ್.ಪಾಟೀಲ್, ಶಾಸಕರಾದ ಎಂ.ವೈ.ಪಾಟೀಲ್,ಜಗದೇವ ಗುತ್ತೇದಾರ್, ಅಲ್ಲಮಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ್, ಖನಿಜಾ ಫಾತಿಮಾ ಭಾಗವಹಿಸಿದ್ದರು.ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜವೇಯಿ ,ಜಿಲ್ಲಾಧಿಕಾರಿ ಫೌಜಿಯಾ ತನರನುಮ್, ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:7 − 2 =
Remember me
