ಚಿಕ್ಕೋಡಿ:ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಜೈನಮುನಿಯ ಹತ್ಯೆಯ ಮಾಹಿತಿ ಬಹಿರಂಗವಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಶವವನ್ನೂ ಪತ್ತೆ ಮಾಡಿದ್ದು, ಹಂತಕರು ಭೀಕರವಾಗಿ ಕೊಲೆ ಮಾಡಿ ಕ್ರೌರ್ಯ ಮೆರೆದಿರುವುದು ಕಂಡುಬಂದಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಜು. 6ರಂದು ನಾಪತ್ತೆಯಾಗಿದ್ದು, ಇಂದು ಅವರ ಹತ್ಯೆಯ ಮಾಹಿತಿ ಹೊರಬಿದ್ದಿತ್ತು. ನಂತರ ಮತ್ತಷ್ಟು ತನಿಖೆ ತೀವ್ರಗೊಳಿಸಿದಾಗ 400 ಅಡಿ ಆಳದ ಕೊಳವೆಬಾಯಿಯೊಳಕ್ಕೆ ಶವವನ್ನು ಎಸೆದಿರುವುದು ತಿಳಿದುಬಂದಿದೆ.
ಇದನ್ನೂ ಓದಿ:ನಾಪತ್ತೆಯಾಗಿದ್ದ ಸ್ವಾಮೀಜಿಯ ದೇಹ ಪೀಸ್ ​ಪೀಸ್​; 400 ಅಡಿ ಆಳದ ಬೋರ್​ವೆಲ್​ನಲ್ಲಿ ಶವದ ತುಂಡುಗಳು ಪತ್ತೆ
ಹಂತಕರು ಸ್ವಾಮೀಜಿಯನ್ನು ಭೀಕರವಾಗಿ ಕೊಲೆ ಮಾಡಿದ್ದು, ಶವ ತುಂಡರಿಸಿದ್ದಾರೆ. ತಲೆಯನ್ನು ಇಬ್ಭಾಗ ಮಾಡಿರುವ ಹಂತಕರು, ಎರಡು ಕೈ, ಎರಡು ಕಾಲುಗಳನ್ನೂ ಕತ್ತರಿಸಿದ್ದಾರೆ. ತೊಡೆಯನ್ನು ಎರಡು ಭಾಗ ಮಾಡಿರುವ ಹಂತಕರು ಹೊಟ್ಟೆಯನ್ನೂ ಕತ್ತರಿಸಿ ಕ್ರೌರ್ಯ ಮೆರೆದಿದ್ದಾರೆ.
ಬಳಿಕ ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದ ಗದ್ದೆಯಲ್ಲಿರುವ 400 ಅಡಿ ಆಳದ ಕೊಳವೆಬಾವಿಗೆ ಶವದ ತುಂಡುಗಳನ್ನು ಎಸೆದಿದ್ದರು. ಕೊಳವೆಬಾವಿಯ 25ನೇ ಅಡಿ ಆಳದಲ್ಲಿ ರಕ್ತಸಿಕ್ತ ಸೀರೆ, ಟವೆಲ್ ಪತ್ತೆಯಾಗಿದ್ದವು. ನಂತರ 30 ಅಡಿ ಆಳದಲ್ಲಿ ಶವದ 9 ತುಂಡುಗಳು ಪತ್ತೆಯಾಗಿವೆ. ಶವದ ತುಂಡುಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಒಂದು ವರ್ಷದ ಅಂತರ.. ಅದೇ ಜಾಗ.. ಒಂದೇ ಥರದಲ್ಲಿ ಸಂಬಂಧಿಕರಿಬ್ಬರ ಸಾವು!

‘ಮೆದುಳು ತಿನ್ನುವ ಅಮೀಬಾ’ ಹತ್ತನೇ ತರಗತಿ ವಿದ್ಯಾರ್ಥಿಯ ಜೀವ ತೆಗೆಯಿತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − one =
Remember me
