ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ 1935ರಲ್ಲಿ ಜನಿಸಿದ ಕಮಲಾ ಹಂಪನಾ ಅವರು, ಚಳ್ಳಕೆರೆಯಲ್ಲಿ ಪ್ರಾಥಮಿಕ ಶಿಕ್ಷಣ, ತುಮಕೂರಿನಲ್ಲಿ ಪ್ರೌಢ ಶಿಕ್ಷಣ ಹಾಗೂ ಮೈಸೂರಿನಲ್ಲಿ ಕಾಲೇಜು ವ್ಯಾಸಂಗ ಮಾಡಿದರು. ಬಿ.ಎ. ಆನರ್ಸ್ ಪದವಿ ಪಡೆದ ಅವರು 1958ರಲ್ಲಿ ಕನ್ನಡ ಅಧ್ಯಾಪಕಿಯಾಗಿ ವೃತ್ತಿ ಆರಂಭಿಸಿದರು. ಬೆಂಗಳೂರು ಮತ್ತು ಮೈಸೂರು ಮಹಾರಾಣಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ, ಬೆಂಗಳೂರಿನ ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿರುವ ಅವರು, ನಿವೃತ್ತರಾದ ಬಳಿಕ ಮೈಸೂರು ವಿಶ್ವವಿದ್ಯಾಲಯದ ಜೈನಶಾಸ್ತ್ರ, ಪ್ರಾಕೃತ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾಗಿ, ಅಧ್ಯಕ್ಷರಾಗಿ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಜೈನಧರ್ಮದ ಹಳಗನ್ನಡ ಗ್ರಂಥ ಸಂಪಾದನೆ, ಜೀವನ ಚರಿತ್ರೆ, ಕಥೆ, ಕವನ, ವ್ಯಕ್ತಿ ಚಿತ್ರ ಸೇರಿ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ 60ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಸಾಹಿತ್ಯ ಕ್ಷೇತ್ರದ ಸಾಧನೆಗೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಬಾಬಾ ಆಮ್ಟೆ ರಾಷ್ಟ್ರೀಯ ಪ್ರಶಸ್ತಿ, ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಹಂಪಿ ವಿವಿಯ ನಾಡೋಜ ಗೌರವ ಸೇರಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮೂಡಬಿದರೆಯಲ್ಲಿ ನಡೆದ 71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದು ಕಮಲಾ ಹಂಪನಾ ಅವರ ಸಾಹಿತ್ಯ ಪಯಣದ ಬಹುದೊಡ್ಡ ಮೈಲಿಗಲ್ಲು.
ತಮ್ಮ ಅಧ್ಯಯನ, ಅಧ್ಯಾಪನ, ಬರಹ, ಭಾಷಣ ಮತ್ತು ಸಂಶೋಧನೆಗಳಿಂದ ಸುಮಾರು 60 ವರ್ಷಗಳ ಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಬಂದಿರುವ ಕಮಲಾ ಹಂಪನಾ ಅವರು ಸಮಕಾಲೀನ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿಯಾಗಿ ಅಚ್ಚಳಿಯದ ಛಾಪು ಮೂಡಿಸಿದ್ದಾರೆ.
ಡಾ.ಕಮಲಾ ಹಂಪನಾ ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಸಂಪುಟಗಳು ಹೊರಬಂದಿವೆ. ನಾಟಕ, ಕತೆಗಳು ಮತ್ತು ಆಧುನಿಕ ವಚನಗಳನ್ನು ಬರೆದಿದ್ದಾರೆ. ಹಾಗೂ ಎರಡು ಇಂಗ್ಲಿಷ್ ಪುಸ್ತಕಗಳನ್ನೂ ರಚಿಸಿದ್ದಾರೆ.
ಕಮಲಾ ಅವರ ಜೊತೆಯಾಗಿ ನಿಂತು ‘ಸಾಹಿತ್ಯ ದಾಂಪತ್ಯದ’ ಆದರ್ಶಕ್ಕೆ ವ್ಯಾಖ್ಯಾನ ಬರೆದವರು ಹಂಪ ನಾಗರಾಜಯ್ಯ. ಇದಕ್ಕೆ ಸಾಕ್ಷಿಯಾಗಿ ಜರ್ಮನಿಯ ಯಾಸೇಮಿನ್ ನಿರ್ದೇಶಿಸಿರುವ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರದಲ್ಲಿ ಭಾರತದ ಪರವಾಗಿ ಕಮಲಾ-ಹಂಪನಾ ಜೋಡಿ ಆಯ್ಕೆಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಒಟ್ಟಿನಲ್ಲಿ ಕನ್ನಡದ ಕಂಪನ್ನು ಹೆಚ್ಚಿಸಿದ ಹಂಪನಾ ದಂಪತಿಗಳ ಕಾರ್ಯವನ್ನು ಸಹೃದಯಿಗಳು ಎಂದಿಗೂ ಮರೆಯುವಂತಿಲ್ಲ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × two =
Remember me
