ಮಂಗಳೂರು:ಕಂಬಳದಲ್ಲಿ ವೇಗವಾಗಿ ಓಡುವ ಮೂಲಕ ವಿಶ್ವದ ಅತ್ಯಂತ ವೇಗದ ಓಟಗಾರ ಎನಿಸಿಕೊಂಡಿರುವ ಉಸಾನ್​ ಬೋಲ್ಟ್​ರನ್ನೂ ಹಿಂದಿಕ್ಕಿದ್ದ ಶ್ರೀನಿವಾಸ್​ ಗೌಡ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪನವರ ಆಹ್ವಾನದ ಮೇರೆಗೆ ಇಂದು ಮಧ್ಯಾಹ್ನ ಸುಮಾರು 2ಗಂಟೆ ಹೊತ್ತಿಗೆ ವಿಧಾನಸೌಧಕ್ಕೆ ಬರಲಿದ್ದಾರೆ.
ಶ್ರೀನಿವಾಸ ಗೌಡ ಅವರು ಕಂಬಳ ಅಕಾಡೆಮಿ ಸಂಚಾಲಕ ಗುಣಪಾಲ್​ ಕಡಂಬ ಮತ್ತು ವಾರ್ತಾ ಇಲಾಖೆ ಸಿಬ್ಬಂದಿಯೊಂದಿಗೆ ಆಗಮಿಸಲಿದ್ದಾರೆ.
ಇದನ್ನೂ ಓದಿ:ಕೇಂದ್ರ ಕ್ರೀಡಾ ಸಚಿವರ ಕಣ್ಣಿಗೆ ಬಿದ್ದ ಕಂಬಳ ಓಟಗಾರ: ಉಸೇನ್​ ಬೋಲ್ಟ್​ಗಿಂತಲೂ ವೇಗವಾಗಿ ಓಡುವ ಈತನಿಗೆ ಸಿಗುತ್ತಾ ಒಲಿಂಪಿಕ್ಸ್​ನಲ್ಲಿ ಭಾಗವಹಿಸುವ ಅವಕಾಶ?
ಶ್ರೀನಿವಾಸ ಗೌಡ ಅವರಿಗೆ ಕ್ರೀಡಾ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸನ್ಮಾನ ಮಾಡಲಿದ್ದಾರೆ.
ಕಂಬಳವೀರ ಶ್ರೀನಿವಾಸ ಗೌಡ ಅವರು ಈಗಾಗಲೇ ಕೇಂದ್ರ ಕ್ರೀಡಾ ಸಚಿವ ಕಿರಣ್​ ರಿಜಿಜು ಅವರ ಗಮನ ಸೆಳೆದಿದ್ದಾರೆ. ಶ್ರೀನಿವಾಸ್ ಗೌಡ ಅವರನ್ನು ಒಲಿಂಪಿಕ್ಸ್​ಗೆ ಕಳಿಸುವ ಬಗ್ಗೆಯೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
