ಬೆಂಗಳೂರುಸಿಬ್ಬಂದಿ ನೇಮಕಾತಿ ಮತ್ತು ಸಮರ್ಪಕ ಮೂಲ ಸೌಕರ್ಯವನ್ನು ಇನ್ನೂ ಕಲ್ಪಿಸದಿರುವ ಕಾರಣ ರಾಮನಗರ ಮತ್ತು ಕನಕಪುರ ವೈದ್ಯಕೀಯ ಕಾಲೇಜುಗಳನ್ನು ರಾಷ್ಟ್ರೀಯ ವೈದ್ಯಕೀಯ ಪರಿಷತ್ತು (ಎನ್‌ಎಂಸಿ) ಕೊನೇ ಹಂತದಲ್ಲಿ ಅನುಮತಿ ನೀಡಲು ನಿರಾಕರಿಸಿದೆ.
ಇತ್ತೀಚೆಗೆ ಎನ್‌ಎಂಸಿ ತಂಡವು ಪರಿಶೀಲನೆ ನಡೆಸಿದ್ದು, ಮೂಲಸೌಕರ್ಯ ಮತ್ತು ಸಿಬ್ಬಂದಿ ನೇಮಕಾತಿ ಕೆಲಸಗಳು ಪೂರ್ಣಗೊಳ್ಳದ ಕಾರಣ ನೀಡಿ ಅರ್ಜಿಗಳನ್ನು ತಿರಸ್ಕರಿಸಿದೆ ಎಂದು ತಿಳಿದು ಬಂದಿದೆ.
ಈ ಮೂಲಕ ರಾಮನಗರ ಮತ್ತು ಕನಕಪುರದಲ್ಲಿ ರಾಜಕೀಯ ಘಟಾನುಘಟಿಗಳಾದ ಎಚ್.ಡಿ. ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ನಿರಾಸೆ ಮೂಡಿಸಿದೆ. ವೈದ್ಯಕೀಯ ಕಾಲೇಜುಗಳ ವಿಚಾರವಾಗಿ ನಡೆಯುತ್ತಿದ್ದ ವಾಗ್ಯುದ್ದ ಮುಂದುವರಿಯುವ ಸಾಧ್ಯತೆಗಳಿವೆ.
ರಾಜ್ಯದಿಂದ 2024-25ನೇ ಸಾಲಿಗೆ ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಈ ಎರಡೂ ಕಾಲೇಜುಗಳಿಗೆ ಅರ್ಜಿ ಸಲ್ಲಿಸಲಾಗಿತ್ತು. ಸರ್ಕಾರ ಸಲ್ಲಿಸಿದ್ದ ಎರಡೂ ಅರ್ಜಿಗಳನ್ನು ಎನ್‌ಎಂಸಿ ತಿರಸ್ಕರಿಸಿದೆ. ಉಳಿದ 3 ಖಾಸಗಿ ಕಾಲೇಜುಗಳಿಗೆ ಅನುಮತಿ ನೀಡಿದೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:four × 5 =
Remember me
