ಬೆಂಗಳೂರು:ಕನಕಶ್ರೀ ಚಾರಿಟಬಲ್ ಟ್ರಸ್ಟ್ (ರಿ.) ಬೆಂಗಳೂರು ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಶೇ.95 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಅಥವಾ ಅದಕ್ಕಿಂತಲೂ ಹೆಚ್ಚಿನ ಅಂಕಗಳನ್ನು ಗಳಿಸಿದ ಕುರುಬ (ಹಾಲುಮತ) ಸಮಾಜದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಳಗಾವಿ ಕಂದಾಯ ವಿಭಾಗದ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಿದ್ಯಾಭ್ಯಾಸ ಮಾಡಿರುವವರು ಮಾತ್ರ ಅರ್ಜಿ ಸಲ್ಲಿಸಬಹುದು. ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ನಗದು ಪ್ರೋತ್ಸಾಹಧನ ಮತ್ತು ಪ್ರಶಂಸಾ ಪತ್ರ ನೀಡಿ ಪುರಸ್ಕರಿಸಲಾಗುವುದು. ಅಂಕಪಟ್ಟಿಯ ದೃಢೀಕೃತ ನಕಲು ಪ್ರತಿ, ವರ್ಗಾವಣೆ ಪ್ರಮಾಣ ಪತ್ರ (ಟಿಸಿ) ಅಥವಾ ಜಾತಿ ಪ್ರಮಾಣ ಪತ್ರದ (ಪ್ರವರ್ಗ-2ಎ) ದೃಢೀಕೃತ ನಕಲು ಪ್ರತಿ, ವಿದ್ಯಾರ್ಥಿಯ ಆಧಾರ್ ಕಾರ್ಡ್ ನಕಲು ಪ್ರತಿ ಮತ್ತು ವಿದ್ಯಾರ್ಥಿಯ ಭಾವಚಿತ್ರದೊಂದಿಗೆ ತಂದೆ ತಾಯಿ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಮುಂತಾದ ವಿವರಗಳನ್ನೊಳಗೊಂಡ ಅರ್ಜಿಯನ್ನು ಜೂ.15 ರೊಳಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಕಳುಹಿಸಬೇಕು.
ಅರ್ಜಿ ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕನಕಶ್ರೀ ಚಾರಿಟಬಲ್ ಟ್ರಸ್ಟ್ ರಿ., ಕೇರ್ ಆಫ್ ಕನಕಶ್ರೀ ಗೃಹ ನಿರ್ಮಾಣ ಸಹಕಾರ ಸಂಘ, ನಂ.20/31, 6ನೇ ಮುಖ್ಯರಸ್ತೆ, 80 ಅಡಿ ರಸ್ತೆ, ಕೆ.ಹೆಚ್.ಬಿ. ಕಾಲೋನಿ 1ನೇ ಹಂತ, ಬಸವೇಶ್ವರನಗರ, ಬೆಂಗಳೂರು-560079ಇವರಿಗೆ ಸಲ್ಲಿಸುವುದು. ಧಾರವಾಡದಲ್ಲಿ ನಡೆಯಲಿರುವ ಪ್ರತಿಭಾ ಪುರಸ್ಕಾರ ಸಮಾರಂಭದ ದಿನಾಂಕ ಮತ್ತು ಸ್ಥಳವನ್ನು ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ನಂತರ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ಪಿ.ಎನ್. ಕೃಷ್ಣಮೂರ್ತಿ 94834 25046 ಸಂಪರ್ಕಿಸಬಹುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 2 =
Remember me
