ಬೆಂಗಳೂರು:ಇಂದು ಕಾವೇರಿ ನೀರಿನ ವಿಚಾರವಾಗಿ ಕರ್ನಾಟಕದಾದ್ಯಂತ ಬಂದ್​ ನಡೆಸಲಾಗುತ್ತಿದ್ದು, ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪೊಲೀಸರ ವಶಕ್ಕೆ ಸಿಲುಕಿಕೊಂಡ ಕನ್ನಡ ಪರ ಹೋರಾಟಗಾರರೊಬ್ಬರು, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಕಾವೇರಿಗಾಗಿ ಕರ್ನಾಟಕ ಬಂದ್: ಪ್ರೇಕ್ಷಕರಿಲ್ಲದೆ ಬಣಗುಡುತ್ತಿರುವ ಚಿತ್ರಮಂದಿರಗಳು, ಚಿತ್ರೋದ್ಯಮವೇ ಸ್ತಬ್ಧ
ಪ್ರತಿಭಟನೆ ನಡೆಸಲು ರಸ್ತೆಗಿಳಿದಿದ್ದ ಕನ್ನಡ ಪರ ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು, ಎಲ್ಲರನ್ನೂ ನಗರದ ಫ್ರೀಡಂ ಪಾರ್ಕ್​ಗೆ ಕರೆ ತಂದರು. ಈ ವೇಳೆ ಪೊಲೀಸರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ ಕಾರ್ಯಕರ್ತರೊಬ್ಬರು, ತಮ್ಮ ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಆಕ್ರೋಶ ಹೊರಹಾಕಿದರು.
“ನ್ಯಾಯ ದೇವತೆಯ ಕಣ್ಣು ಕಟ್ಟಿದಂತೆ, ಇವತ್ತು ಹೋರಾಟಗಾರರ ಕಣ್ಣೂ ಕಟ್ಟಿದ್ದಾರೆ. ನ್ಯಾಯ ಸಿಗುತ್ತಿಲ್ಲ, ಹೋರಾಟ ಮಾಡಲು ಬಿಡುತ್ತಿಲ್ಲ. ನಮಗೆ ಕುಡಿಯಲು ನೀರಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಕಷ್ಟದ ಪರಿಸ್ಥಿತಿ ಎದುರಾಗಲಿದೆ” ಎಂದು ಹೇಳಿದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 6 =
Remember me
