ಮೈಸೂರು:ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದಿವಂಗತ ಎಂ.ಪಿ. ಶಂಕರ್ ಅವರ ಪತ್ನಿ ಮಂಜುಳಾ ಶಂಕರ್ (75) ಹೃದಯಾಘಾತದಿಂದ ನಿಧನರಾದರು. ‌
ಕೆಲ ದಿನಗಳ ಹಿಂದೆ ಮಂಜುಳಾ ಶಂಕರ್ ಅವರಿಗೆ ಹೃದಯಾಘಾತವಾಗಿತ್ತು. ಆ ವೇಳೆ ಅಂಜಿಯೋಗ್ರಾಮ್ ಮಾಡಿಸಲಾಗಿತ್ತು. ನಂತರ ಬೈಪಾಸ್ ಸರ್ಜರಿಯನ್ನೂ ಮಾಡಲಾಗಿತ್ತು. ಮಂಗಳವಾರ ಬೆಳಗ್ಗೆ ಮೈಸೂರಿನ ನಿವಾಸದಲ್ಲೇ ಮಂಜುಳಾ ಕೊನೆಯುಸಿರೆಳೆದಿದ್ದಾರೆ. ಮಂಜುಳಾರ ಅಂತ್ಯಕ್ರಿಯೆ ಮಧ್ಯಾಹ್ನ ವಿದ್ಯಾರಣ್ಯಪುರಂನಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ನೆರವೇರಿತು.ಎಂ.ಪಿ. ಶಂಕರ್ ಕನ್ನಡ ಚಿತ್ರರಂಗದ ದಿಗ್ಗಜರಲ್ಲಿ ಒಬ್ಬರು. ಇವರು ಅನೇಕ ಖಳನಾಯಕ ಪಾತ್ರಗಳಲ್ಲಿ ನಟಿಸಿದ್ದಾರೆ. ಸತ್ಯ ಹರಿಶ್ಚಂದ್ರ, ಶನಿಪ್ರಭಾವ, ಬಂಗಾರದ ಮನುಷ್ಯ, ಗಂಧದ ಗುಡಿ, ಭೂತಯ್ಯನ ಮಗ ಅಯ್ಯ ಸೇರಿ ಹಲವು ಚಿತ್ರಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು.
ಸತ್ಯ ಹರಿಶ್ಚಂದ್ರ ಚಿತ್ರದ ‘ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ..’ ಹಾಡಿನ ಮನೋಜ್ಞ ಅಭಿನಯದಿಂದ ಹೆಚ್ಚು ನೆನಪಾಗುವ ಎಂ.ಪಿ.ಶಂಕರ್ ಅವರು ಡಾ.ರಾಜ್ ಕುಮಾರ್​, ನರಸಿಂಹರಾಜು, ದ್ವಾರಕೀಶ್, ವಿಷ್ಣುವರ್ಧನ್ ಸೇರಿದಂತೆ ಕನ್ನಡ ಚಿತ್ರರಂಗದ ಅಗ್ರಜರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು. ಎಂ.ಪಿ ಶಂಕರ್ 2008ರಲ್ಲಿ ನಿಧನರಾಗಿದ್ದರು.‌
ಇದು ಸತ್ತವರನ್ನು ಬದುಕಿಸೋ ಜಾತ್ರೆ! ಕೊಳ್ಳೇಗಾದಲ್ಲಿ ರಾತ್ರಿಯಿಡೀ ನಡೆಯಿತು ನರಬಲಿ ವಿಸ್ಮಯ…

ಕೆಆರ್​ಎಸ್​ಗೆ ಸರ್​ ಎಂ.ವಿಶ್ವೇಶ್ವರಯ್ಯರ ಮರಿಮೊಮ್ಮಗ ಭೇಟಿ: ಕುಟುಂಬ ಸಮೇತ ಜಲವೈಭವ ವೀಕ್ಷಣೆ

ಬಿಕಿನಿ ಧರಿಸಿಕೊಂಡೇ ಬರ್ತ್​ ಡೇ ಕೇಕ್​ ಕತ್ತರಿಸಿದ ಆಮಿರ್​ ಖಾನ್​ ಪುತ್ರಿ ಇರಾ! ಫೋಟೋ ವೈರಲ್​, ನೆಟ್ಟಿಗರಿಂದ ಬಗೆಬಗೆಯ ಕಮೆಂಟ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − two =
Remember me
