ಬೆಂಗಳೂರು:ಕನ್ನಡ ಅಭಿವೃದ್ಧಿ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ರಾಜಭವನದ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರಿಗೆ ಇಂದು ‘ಕನ್ನಡ ಚಂದ್ರ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ನಗರದ ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ಗುರುವಾರ ಕನ್ನಡ ಚಂದ್ರ ಪ್ರಶಸ್ತಿ ಪ್ರದಾನ ಸಮಿತಿ, ಸಪ್ನಾ ಬುಕ್ ಹೌಸ್, ಕರ್ನಾಟಕ ವಿಕಾಸ ರಂಗ ವತಿಯಿಂದ ರಾ. ನಂ. ಚಂದ್ರಶೇಖರ್-70 ‘ಕನ್ನಡ ಡಿಂಡಿಮ’ ಪರಿಷ್ಕೃತ ಆವೃತ್ತಿಯ ಲೋಕಾರ್ಪಣೆ ಹಾಗೂ ‘ಕನ್ನಡ ಚಂದ್ರ’ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ರಾಜಭವನದ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರಿಗೆ ಕಾನೂನು ಸಚಿವರಾದ ಮಾಧುಸ್ವಾಮಿ, ಚಲನಚಿತ್ರ ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಗೊ.ರು. ಚನ್ನಬಸಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗಾಭರಣ ಅವರು ಕನ್ನಡ ಚಂದ್ರ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ರಾ. ನಂ. ಚಂದ್ರಶೇಖರ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಪ್ರೇಯಸಿಯ ರುಂಡ ಕಡಿದ ಪ್ರೇಮಿ; ಕೊಲೆಗಾರನನ್ನು ತನಗೊಪ್ಪಿಸಿ ಎಂದು ಸ್ಟೇಷನ್​ ಮುಂದೆ ರೊಚ್ಚಿಗೆದ್ದ ಅಣ್ಣ..
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:twenty − 6 =
Remember me
