ವಿಜಯಪುರ:ಕರ್ನಾಟಕ-ಮಹಾರಾಷ್ಟ್ರ ಗಡಿ ಸಮಸ್ಯೆ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಲೇ ಇದೆ. ಇದೀಗ ಮಹಾರಾಷ್ಟ್ರದಲ್ಲಿ ಕರ್ನಾಟಕದ ವಿಚಾರವಾಗಿ ಸಮಸ್ಯೆ ಉಂಟು ಮಾಡುತ್ತಿರುವವರ ವಿರುದ್ಧ ಕರ್ನಾಟಕದಲ್ಲಿ ನಿರಂತರ ಆಕ್ರೋಶ ಕೇಳಿ ಬರುತ್ತಲೇ ಇದೆ. ಈ ನಡುವೆ ಮರಾಠಿ ಕನ್ನಡಿಗರು ಮಹಾರಾಷ್ಟ್ರ ನೆಲದಲ್ಲಿ ಕನ್ನಡದ ಧ್ವಜ ಹಾರಾಸಿದ್ದಾರೆ.
ಗಡಿ ವಿವಾದದ ಬೆನ್ನಲ್ಲೇ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ತಿಕ್ಕುಂಡಿ ಗ್ರಾಮದ ಮುಖ್ಯ ದ್ವಾರಕ್ಕೆ ಗ್ರಾಮಸ್ಥರು ಕನ್ನಡ ಬಾವುಟ ಕಟ್ಟಿದ್ದಾರೆ. ನಂತರ ಜೈ ಕರ್ನಾಟಕ ಎಂದು ಘೋಷಣೆ ಕೂಗಿದ್ದಾರೆ. ಮೊದಲು ಅಭಿವೃದ್ಧಿ ಕಡೆಗೆ ಗಮನಕೊಡಿ ಎಂದು ಮಹಾರಾಷ್ಟ್ರ ಸರಕಾರಕ್ಕೆ ಮರಾಠಿ ಕನ್ನಡಗರು ಎಚ್ಚರಿಸಿದ್ದಾರೆ.
ಇತ್ತೀಚೆಗೆ ಮಹಾರಷ್ಟ್ರ ಹಾಗೂ ಕರ್ನಾಟಕದ ಗಡಿ ವಿವಾದದ ಸಮಸ್ಯೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾತನಾಡುತ್ತಾ, ಕರ್ನಾಟಕದಲ್ಲಿರುವ ನಿಪ್ಪಾಣಿ ಹಾಗೂ ಬೆಳಗಾವಿಯನ್ನು ಮಹಾರಷ್ಟ್ರಕ್ಕೆ ಸೇರಿಸುತ್ತೇವೆ ಎಂದು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದೇವೇಂದ್ರ ಫಡ್ನವೀಸ್ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ನನಸಾಗುವುದಿಲ್ಲ. ನೆಲ, ಜಲ ಹಾಗೂ ಗಡಿಯ ವಿಚಾರದಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದರು.
ಗಡಿ ವಿವಾದದ ಕುರಿತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ಖಂಡಿಸಿ ಮರಾಠ ಮಹಾಸಂಘ ನಿನ್ನೆ (ನ.25) ಕರ್ನಾಟಕದ ಬಸ್​ಗಳಿಗೆ ಕಪ್ಪು ಬಣ್ಣ ಬಳಿದು ಪ್ರತಿಭಟನೆ ನಡೆಸಿತ್ತು. ಮಹಾರಾಷ್ಟ್ರಕ್ಕೆ ತೆರಳುವ ಕರ್ನಾಟಕದ ಬಸ್​ಗಳಿಗೆ ಕಪ್ಪು ಬಣ್ಣ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + twenty =
Remember me
