ಬೆಂಗಳೂರು:ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ನಾಮಕರಣಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ನ. 1ರಿಂದ ವರ್ಷ ಪೂರ್ತಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕನ್ನಡ ಕಾರ್ಯಕ್ರಮ ರೂಪಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಈ ಸಂಬಂಧ ರಾಜ್ಯದ ನಾಲ್ಕು ವಲಯಗಳಲ್ಲಿ ಸಾಹಿತಿಗಳೊಂದಿಗೆ ಸಭೆ ನಡೆಸಿ ಅವರಿಂದ ಅಗತ್ಯ ಸಲಹೆಗಳನ್ನು ಪಡೆದು ಕಾರ್ಯಕ್ರಮದ ರೂಪುರೇಷೆಗಳ ಕುರಿತು ರ್ಚಚಿಸಿ ಕ್ರಮ ವಹಿಸಲಾಗುವುದು ಎಂದು ವಿಜಯವಾಣಿ ಸಂವಾದದಲ್ಲಿ ಮಂಗಳವಾರ ತಿಳಿಸಿದರು.
ಇದೇ ಸಂದರ್ಭದಲ್ಲಿ ಕನ್ನಡ ಬಾವುಟ ಅಧಿಕೃತಗೊಳಿಸುವ ಸಂಬಂಧ ಕೇಂದ್ರಕ್ಕೆ ಈಗಾಗಲೆ ಸಲ್ಲಿಸಿರುವ ಪ್ರಸ್ತಾವನೆ ಪರಿಗಣಿಸಿ ಕ್ರಮ ವಹಿಸುವಂತೆ ಕೇಂದ್ರಕ್ಕೆ ಪತ್ರ ಬರೆಯಲಾಗುವುದು. ಸಾಧ್ಯವಾದಲ್ಲಿ ಮುಖ್ಯಮಂತ್ರಿಗಳ ನೇತೃತ್ವದ ನಿಯೋಗವನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದರು.
ಉತ್ತರ ಕರ್ನಾಟಕ ಭಾಗದಿಂದ ಬಂದಿರುವ ನನಗೆ ಕನ್ನಡವೇ ಪ್ರಮುಖ ಭಾಷೆಯಾಗಿದ್ದು, ಕನ್ನಡ ಭಾಷೆ ಉಳಿಸಿ ಮುಂದಿನ ಪೀಳಿಗೆಗೂ ತಲುಪಿಸುವ ನಿಟ್ಟಿನಲ್ಲಿ ಹೊಸ ಪ್ರಯೋಗಗಳನ್ನು ಮಾಡುವ ಆಸಕ್ತಿ ಹೊಂದಿದ್ದೇನೆ. ಗಡಿನಾಡಿನ ಕನ್ನಡ ಹಾಗೂ ಕನ್ನಡಿಗರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುವುದಾಗಿ ಹೇಳಿದರು. ಕನ್ನಡಿಗರಿಗೆ ಉದ್ಯೋಗ ಸಂಬಂಧ ಮಹಿಷಿ ವರದಿ ಜಾರಿಗೆ ಕ್ರಮವಹಿಸಲಾಗುವುದು. ಶಾಲೆಗಳಲ್ಲಿ ಕನ್ನಡ ಕಡ್ಡಾಯ ಗೊಳಿಸಲು ನಿಯಮವನ್ನು ಸಮರ್ಪಕವಾಗಿ ಜಾರಿಗೆ ತರಲು ಜಾಗೃತ ದಳ ರಚಿಸಿ ಪರಿಶೀಲನೆ ನಡೆಸಲಾಗುವುದು. ಈ ಕುರಿತು ಅಗತ್ಯವಿದ್ದಲ್ಲಿ ನಿಯಮಕ್ಕೆ ತಿದ್ದುಪಡಿ ತರಲಾಗುವುದು ಎಂದು ಹೇಳಿದರು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಇಲಾಖೆ ವತಿಯಿಂದ ನಡೆಸಲು ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಹಾಗಾಗಿ ಟೆಂಡರ್ ಕರೆದು ಈವೆಂಟ್ ಮ್ಯಾನೇಜ್ಮೆಂಟ್​ಗಳಿಗೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅಗತ್ಯ ಇರುವೆಡೆ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು ಎಂದರು.
ಅಕಾಡೆಮಿಗಳು ಹಾಗೂ ಪ್ರಾಧಿಕಾರಿಗಳಿಗೆ ಅನುದಾನ ಬಿಡುಗಡೆಯಲ್ಲಿ ಸಮಸ್ಯೆ ಆಗಿದ್ದರೂ, ಅವುಗಳು ಉತ್ತಮವಾಗಿಯೇ ಕಾರ್ಯನಿರ್ವಹಿಸಿವೆ. ಕನ್ನಡ ಪುಸ್ತಕ ಪ್ರಾಧಿಕಾರದಿಂದಲೂ ಉತ್ತಮ ಪುಸ್ತಕಗಳು ಪ್ರಕಟವಾಗಿದೆ. ಆದರೆ ಮೊಬೈಲ್ ಬಳಕೆಯಿಂದಾಗಿ ಪುಸ್ತಕ ಓದುವವರ ಸಂಖ್ಯೆ ಕಡಿಮೆಯಾಗಿದೆ. ಜನರಲ್ಲಿ ಓದುವ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದರು.
27 ಟ್ರಸ್ಟ್​ಗಳ ಸಭೆ: ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 27 ಟ್ರಸ್ಟ್​ಗಳಿದ್ದು, ಅವುಗಳ ಸಭೆಯನ್ನೇ ಮಾಡಿರಲಿಲ್ಲ. ನಾನು ಸಚಿವನಾದ ಬಳಿಕ ಮೊದಲ ಬಾರಿಗೆ ಅಷ್ಟೂ ಟ್ರಸ್ಟ್​ಗಳ ಸಭೆ ನಡೆಸಿದ್ದೇನೆ ಎಂದು ಹೇಳಿದರು.
ಕೊಪ್ಪಳದಲ್ಲಿ ಜಾನಪದ ಲೋಕ:ಜನಪದದಲ್ಲಿ ಉತ್ತರ ಕರ್ನಾಟಕ ಸಮೃದ್ಧಿಯಾಗಿದೆ. ರಾಮನಗರದ ಲ್ಲಿರುವ ಜಾನಪದ ಲೋಕದ ಮಾದರಿಯಲ್ಲಿ ಕೊಪ್ಪಳದಲ್ಲಿ ಜಾನಪದ ಲೋಕ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಸಚಿವ ತಂಗಡಗಿ ತಿಳಿಸಿದರು.
ಅಕಾಡೆಮಿ ಸ್ಥಳಾಂತರವಿಲ್ಲ:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿರುವ ಬಹುತೇಕ ಅಕಾಡೆಮಿಗಳು ಬೆಂಗಳೂರಿನಲ್ಲಿವೆ. ಉತ್ತರ ಕರ್ನಾಟಕ ಭಾಗಕ್ಕೆ ಸ್ಥಳಾಂತರ ಮಾಡಬೇಕೆನ್ನುವ ಬೇಡಿಕೆ ಇದೆ. ಆದರೆ, ಸದ್ಯ ಯಾವ ಅಕಾಡೆಮಿಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರ ಮಾಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಅಕಾಡೆಮಿಗಳಿಗೆ ಅಗತ್ಯವಿರುವ ಅನುದಾನ ಒದಗಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ನಿಗಮ ಮುಚ್ಚುವುದಿಲ್ಲ:ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಟ್ಟು 11 ಹೊಸ ನಿಗಮಗಳನ್ನು ಮಾಡಿ ಆದೇಶಿಸಿತ್ತು. ಆದರೆ, ಇದೆಲ್ಲವೂ ಆದೇಶದಲ್ಲಿ ಮಾತ್ರ ಇವೆಯೇ ಹೊರತು ಬೇರೇನೂ ಆಗಿಲ್ಲ. ನಿಗಮಕ್ಕೆ ಅಗತ್ಯವಿರುವ ಹಣಕಾಸು, ನೇಮಕಾತಿ, ರಿಜಿಸ್ಟೇಷನ್ ಯಾವುದೂ ಮಾಡಿಲ್ಲ. ಆದರೆ, ಈ ನಿಗಮಗಳನ್ನು ರದ್ದು ಮಾಡುವುದಿಲ್ಲ. ಅಷ್ಟೂ ನಿಗಮಗಳನ್ನು ಮುಂದುವರಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ರ್ಚಚಿಸಿದ್ದು, ಮುಂಬರುವ ಬಜೆಟ್​ನಲ್ಲಿ ಹಣಕಾಸು ನೆರವು ಒದಗಿಸಲಾಗುವುದೆಂದು ಸಿಎಂ ಭರವಸೆ ನೀಡಿದ್ದಾರೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಎಂಬಿಎ ಪದವೀಧರ, ಅಕೌಂಟ್​ನಲ್ಲಿ 20 ಲಕ್ಷ, ಆದ್ರೂ 150 ರೂ. ದಿನಗೂಲಿ ಕೆಲಸ: ಕೊನೆಗೂ ಸಿಕ್ಕಿಬಿದ್ದ ಕೊಲೆಗಾರ ಪ್ರಿಯಕರ

ಉರುಳಿ ಬಿದ್ದ ಬೃಹತ್ ಬಂಡೆ, ಎರಡು ಕಾರು ಅಪ್ಪಚ್ಚಿ; ಇಬ್ಬರ ಸಾವು, ಮೂವರಿಗೆ ಗಂಭೀರ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
