
ಬೆಂಗಳೂರು:ಕನ್ನಡದ ಬೋರ್ಡ್ ಹಾಕಬೇಕು ಎಂದು ಹೋರಾಟ ಮಾಡಿದವರ ಮೇಲೆ ಪ್ರಕರಣ ದಾಖಲಿಸಿ, ಬಂಧಿಸಿರುವುದು ಸರಿಯಲ್ಲ ಎಂದು ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದಾರೆ.ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮತ್ವ ಆಗಬೇಕು. ಕನ್ನಡ ನೆಲದಲ್ಲಿ ಕನ್ನಡವೇ ಉಸಿರಾಗಬೇಕು. ಬಂಧಿಸಿದವರನ್ನು ಬಿಡುಗಡೆ ಮಾಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.
*ಕರ್ನಾಟಕದಲ್ಲಿ ಕನ್ನಡವೇ ಸತ್ಯ. ಕನ್ನಡವೇ ನಿತ್ಯ. ಕನ್ನಡದಲ್ಲಿ ಬೋರ್ಡ್ ಇರಬೇಕು ಎನ್ನುವುದರಲ್ಲಿ ತಪ್ಪೇನಿದೆ. ಸರ್ಕಾರವೇ ಆ ಕೆಲಸ ಮಾಡಲಿ. ಕನ್ನಡ ಪರ ಹೋರಾಟಗಾರರನ್ನು ಬಂಧಿಸಿದ್ದು ಸರಿಯಲ್ಲ. ಕೂಡಲೆ ಅವರನ್ನು ಬಿಡುಗಡೆ ಮಾಡಬೇಕು.-ಬಿ.ಸಿ.ಪಾಟೀಲ್, ಮಾಜಿ ಸಚಿವ.
*ಕನ್ನಡ ನೆಲದಲ್ಲಿ ಕನ್ನಡದ ನಾಮಲಕ ದೊಡ್ಡದಾಗಿ ಇರಬೇಕು. ಅದಕ್ಕೆ ಎಲ್ಲರೂ ಸಹಕರಿಸಬೇಕು. ಕನ್ನಡ ಹೋರಾಟಗಾರರನ್ನು ಬಂಧಿಸಿರುವುದು ಕಾನೂನು ವಿಚಾರಕ್ಕೆ ಸಂಬಂದಿಸಿದ್ದು.-ಆರಗ ಜ್ಞಾನೇಂದ್ರ, ಮಾಜಿ ಸಚಿವರು.
*ವಾಕ್ ಸ್ವಾತಂತ್ರದ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರು ಕಲ್ಲಡ್ಕ ಪ್ರಭಾಕರ ಭಟ್ ಅವರ ಮೇಲೆ ಕೇಸು ಹಾಕಿಸಿರುವುದು ಯಾಕೆ? ಅವರು ಮಾತನಾಡಿರುವುದರಲ್ಲಿ ತಪ್ಪೇನಿದೆ?-ಕೋಟ ಶ್ರೀನಿವಾಸ ಪೂಜಾರಿ, ಮೇಲ್ಮನೆ ವಿರೋಧ ಪಕ್ಷದ ನಾಯಕರು.
ಯತ್ನಾಳ್ ಉಚ್ಛಾಟಿಸಬೇಕು: ರೇಣುಕಾಚಾರ್ಯಯತ್ನಾಳ್ ನಾಲಿಗೆಗೂ ಮತ್ತು ಮೆದುಳಿಗೂ ಸಂಬಂದವೇ ಇಲ್ಲದೆ ಹುಚ್ಚನಂತೆ ಮಾತನಾಡುತ್ತಿದ್ದಾರೆ. ಮೊದಲು ಅವರನ್ನು ನಿಮಾನ್ಸ್‌ಗೆ ಸೇರಿಸಬೇಕು. ಅವರೊಬ್ಬ ಕಾಮಿಡಿ ಪೀಸ್. ಅವರಿಂದ ಕಾಂಗ್ರೆಸ್‌ನವರು ಏನೇನು ಲಾಭ ಮಾಡಿಕೊಂಡಿದ್ದಾರೆ ಎನ್ನುವುದು ಗೊತ್ತಿದೆ. ಅವರೊಬ್ಬ ಕಾಂಗ್ರೆಸ್ ಏಜೆಂಟ್.-ರೇಣುಕಾಚಾರ್ಯ, ಮಾಜಿ ಸಚಿವರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + nineteen =
Remember me
