ಮೈಸೂರು:ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಹೃದಯಾಘಾತವಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ 4 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿವಾಹದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿದೆ. ಬಳಿಕ ಎದೆ ನೋವು ಕಂಡುಬಂದ ಹಿನ್ನೆಲೆ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದರು. ಅರ್ಜುನ್ ಜನ್ಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ತಜ್ಞ ವೈದ್ಯೆ ಡಾ.ಅದಿತಿ ಉಡುಪ ನೇತೃತ್ವದಲ್ಲಿ ಸ್ಪೆಷಲ್ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅರ್ಜುನ್ ಜನ್ಯ ಅವರಿಗೆ ಬುಧವಾರ ಮುಂಜಾನೆ ಆಂಜಿಯೋಗ್ರಾಂ, ಆಂಜಿಯೋಪ್ಲಾಸ್ಟಿ ಮಾಡಲಾಯಿತು. ಹೃದಯಭಾಗದ ರಕ್ತ ನಾಳಗಳು ಶೇ.99 ಬ್ಲಾಕ್ ಆಗಿದ್ದವು. ಸರಿಯಾದ ಸಮಯಕ್ಕೆ ಚಿಕಿತ್ಸೆಗೆ ದಾಖಲಾಗಿದ್ದರಿಂದ ಸೇಫ್ ಆಗಿದ್ದಾರೆ. ಇನ್ನೆರೆಡು ದಿನದಲ್ಲಿ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ಡಾ.ಅದಿತಿ ಉಡುಪ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
