ಬೆಂಗಳೂರು:ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ, ಶೇ.40ರಷ್ಟು ಅನ್ಯ ಭಾಷೆ ಬಳಕೆಗೆ ಅವಕಾಶ ಕಲ್ಪಿಸಲು ನಿಯಮಕ್ಕೆ ತಿದ್ದುಪಡಿ ತಂದು ಹೊರಡಿಸಲಾಗಿದ್ದ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಬಜೆಟ್ ಅಧಿವೇಶನ ಹತ್ತಿರದಲ್ಲಿರುವಾಗ ವಿಧಾನಮಂಡಲದಲ್ಲೇ ವಿಧೇಯಕದ ಮೂಲಕ ಜಾರಿಗೆ ತರುವ ಬದಲು ತರಾತುರಿಯಲ್ಲಿ ಸುಗ್ರೀವಾಜ್ಞೆ ಹೊರಡಿಸುವ ಔಚಿತ್ಯವೇನಿತ್ತು ಎಂದು ರಾಜ್ಯಪಾಲರು ಪ್ರಶ್ನಿಸಿದ್ದಾರೆ.
ಜ. 5ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ತರಲು ಅನುಮೋದನೆ ನೀಡಲಾಗಿತ್ತು. ನಾಮಫಲಕದಲ್ಲಿ ಕನ್ನಡ ಕಡೆಗಣನೆ ವಿರೋಧಿಸಿ ಹೋರಾಟ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಸರ್ಕಾರ ಈ ನಿಲುವು ಪ್ರಕಟಿಸಿತ್ತು. ಫೆ.28ರೊಳಗೆ ಹೊಸ ನೀತಿ ಅನುಷ್ಠಾನ ಮಾಡಲಾಗುತ್ತದೆ ಎಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ವಿಷಯ ಪ್ರಕಟಿಸಿದ್ದರು. ಅದಾದ ಒಂದು ವಾರದಲ್ಲಿ ನಡೆದ ಸಂಪುಟ ಸಭೆಯಲ್ಲಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ-2024ಕ್ಕೆ ಅನುಮೋದನೆ ನೀಡಲಾಗಿತ್ತು.
ಕನ್ನಡ ಪರ ಹೋರಾಟಗಾರರನ್ನು ಸಂತೈಸಲು, ನಾಡು-ನುಡಿಗೆ ಕಟಿಬದ್ಧವೆಂಬ ಸ್ಪಷ್ಟ ಸಂದೇಶವನ್ನು ಸರ್ಕಾರ ಸಾರಿತ್ತು. ಸರ್ಕಾರ ತನ್ನ ನಿರ್ಣಯವನ್ನು ರಾಜಭವನಕ್ಕೆ ಕಳಿಸಿತ್ತು. ಅಧಿವೇಶನ ನಡೆಯದ ಸಂದರ್ಭದಲ್ಲಿ ತುರ್ತಾಗಿ ಇದನ್ನು ಜಾರಿ ಮಾಡುವ ಅಗತ್ಯವಿದೆ ಈ ಕಾರಣಕ್ಕೆ ಸುಗ್ರೀವಾಜ್ಞೆ ತರಲಾಗುತ್ತಿದೆ ಎಂದು ಸಮರ್ಥಿಸಿಕೊಂಡಿತ್ತು. ಆದರೆ ರಾಜಭವನ ಸರ್ಕಾರದ ವಾದವನ್ನು ಒಪ್ಪಿಲ್ಲ. ಫೆಬ್ರವರಿಯಲ್ಲಿ ಜಂಟಿ ಅಧಿವೇಶನ, ಬಜೆಟ್ ಅಧಿವೇಶನ ಇರುವಾಗ ಸುಗ್ರೀವಾಜ್ಞೆ ತರುವಷ್ಟು ತುರ್ತು ಏನಿದೆ ಎಂಬರ್ಥದಲ್ಲಿ ಪ್ರಸ್ತಾವನೆ ವಾಪಸ್ ಕಳಿಸಿದೆ ಎಂದು ಮೂಲಗಳು ತಿಳಿಸಿವೆ.
ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ನಾಮಫಲಕದಲ್ಲಿ ಕನ್ನಡಕ್ಕೆ ಪ್ರಾಧಾನ್ಯತೆ ಇರಬೇಕೆಂದು ಕಾನೂನು ಮಾಡಿದ್ದೇವೆ. ಈ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಿದ್ದೆವು. ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಬಹುದಾಗಿತ್ತು, ಆದರೆ ಅವರು ವಿಧಾನ ಮಂಡಲ ಅಧಿವೇಶನದಲ್ಲೇ ಜಾರಿ ಮಾಡಲು ಹೇಳಿದ್ದಾರೆ ಎಂದರು.
ಹಾಗೆಯೇ, ಬೆಳಗಾವಿ ಅಧಿವೇಶನದಲ್ಲಿ ಕೈಗೊಂಡ ಕೆಲವು ಮಸೂದೆ, ತೀರ್ವನಗಳಿಗೆ ರಾಜ್ಯಪಾಲರು ಸಹಿ ಹಾಕಲು ತಡಮಾಡಿದ್ದರು ಎಂಬ ಗುಸುಗುಸು ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬಂದಿದೆ. ಇದೇ ಕಾರಣಕ್ಕೆ ಸಚಿವರಿಬ್ಬರು ರಾಜಭವನಕ್ಕೆ ತೆರಳಿ ಮನವರಿಕೆ ಮಾಡಿಕೊಟ್ಟು ಬಂದಿದ್ದರೆಂಬ ಮಾಹಿತಿ ಇದೆ. ಇದಾದ ಬಳಿಕ ತೀರ್ಮಾನ ಕೈಗೊಳ್ಳುವ ಭರವಸೆ ಸಿಕ್ಕಿದೆ ಎಂದೂ ಹೇಳಲಾಗುತ್ತಿದೆ.
ಮೊದಲ ಹೆಜ್ಜೆ?:ರಾಜಭವನದ ಈ ನಿರ್ಧಾರ ಆಡಳಿತಾರೂಢ ಪಕ್ಷದಲ್ಲಿ ವಿವಿಧ ಮಗ್ಗುಲುಗಳಲ್ಲಿ ಚರ್ಚೆಯಾಗುತ್ತಿದೆ. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು ದೆಹಲಿಯಲ್ಲಿ ಅಲ್ಲಿನ ಸರ್ಕಾರದೊಂದಿಗಿನ ರಾಜ್ಯಪಾಲರ ಭಿನ್ನ ನಡೆ ಭಾರಿ ಚರ್ಚೆಯಲ್ಲಿದೆ. ಎಲ್ಲವನ್ನೂ ಅನುಸರಿಸಿಕೊಂಡು ಹೋಗುವ ಮನಸ್ಥಿತಿ ಏನಿಲ್ಲ, ಸೂಕ್ತ ಸಂದರ್ಭದಲ್ಲಿ ನಮ್ಮ ಅಧಿಕಾರ ನಾವು ಚಲಾಯಿಸುತ್ತೇವೆ ಎಂದು ರಾಜ್ಯಪಾಲರು ಸಂದೇಶ ಕಳಿಸಿರಬಹುದೇ ಎಂಬ ಗುಸುಗುಸು ಇಲ್ಲಿಯೂ ಕೇಳಿಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − three =
Remember me
