ಬೆಂಗಳೂರು:ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ಕನ್ನಡದಲ್ಲಿಯೇ ದರಪಟ್ಟಿ ಪ್ರಕಟಿಸುವ ಪ್ರಮುಖ ನಿರ್ಧಾರವನ್ನು ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಉತ್ಪನ್ನಗಳ ಸಚಿವ ಹರ್ದೀಪ್‌ಸಿಂಗ್ ಪ್ರಕಟಿಸಿ, ಬುಧವಾರವೇ ಜಾರಿಗೆ ಬರಲಿದೆ ಎಂದು ತಿಳಿಸಿದರು.
ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಕ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ದರಪಟ್ಟಿ ಇಂಗ್ಲಿಷ್‌ನಲ್ಲಿ ಮಾತ್ರ ಇರುತ್ತವೆ. ಕನ್ನಡದಲ್ಲಿಯೂ ಇರಬೇಕೆಂಬ ಮನವಿಗಳು ಬಂದಿದ್ದು, ತಕ್ಷಣವೇ ಕ್ರಮಕೈಗೊಳ್ಳಲು ತೈಲ ಕಂಪನಿಗಳಿಗೆ ಸೂಚಿಸಲಾಗಿದೆ ಎಂದರು.
ರಾಜ್ಯದೆಲ್ಲೆಡೆ ಕನ್ನಡ ನಾಮಲಕ ಸದ್ದು ಮಾಡುತ್ತಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರು ಪೆಟ್ರೋಲ್ ಬಂಕ್‌ಗಳಲ್ಲಿ ಕನ್ನಡದಲ್ಲಿ ದರಪಟ್ಟಿ ನಿರ್ಧಾರ ಕೈಗೊಂಡಿರುವುದು ಗಮನಾರ್ಹ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಪಿ.ಸಿ.ಮೋಹನ್ ಇನ್ನಿತರರು ಇದ್ದರು.
ಕನ್ನಡ ಚಳವಳಿಗಾರರನ್ನು ಮೆಚ್ಚಿಸಲು ರಾಜ್ಯ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟಿದೆ. ನಾಮಲಕದಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಸಲು ಸೂಚಿಸಿ, ತಿದ್ದುಪಡಿ ನಿಯಮವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಕೆಲವು ದಿನಗಳ ಹಿಂದೆಯಷ್ಟೇ ತೀರ್ಮಾನಿಸಿದ್ದನ್ನು ಸ್ಮರಿಸಬಹುದು.
ಚುನಾವಣೆ ಸಮೀಪಿಸುತ್ತಿರುವ ಕಾರಣ ಡೀಸೆಲ್, ಪೆಟ್ರೋಲ್ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಯೋಚಿಸುತ್ತಿದೆಯೆ ? ಎಂಬ ಪ್ರಶ್ನೆಗೆ ನೇರವಾಗಿ ಉತ್ತರಿಸಲು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ನಿರಾಕರಿಸಿದರು.
ವಿಶ್ವದ ಎಲ್ಲ ದೇಶಗಳಲ್ಲಿ ಡೀಸೆಲ್, ಪೆಟ್ರೋಲ್ ದರ ಏರಿಕೆಯಾಗುತ್ತಿದ್ದರೆ, ಭಾರತದಲ್ಲಿ ಕಳೆದ ಎರಡು ವರ್ಷಗಳಿಂದ ಕಡಿಮೆಯಾಗಿದೆ. ಅಲ್ಲದೆ, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸುಂಕವನ್ನು ಮೋದಿಯವರು ಎರಡು ಬಾರಿ ಇಳಿಸಿದ್ದಾರೆ.
ಮೇ ವೇಳೆಗೆ 45 ಸಾವಿರ ಬ್ಯಾರೆಲ್ ಕಚ್ಚಾ ತೈಲ ಉತ್ಪಾದನೆಗೆ ದೇಶ ಮುಂದಾಗಿದೆ. ಅಂದರೆ ತಲಾ ಶೇ.7ರಷ್ಟು ಪೆಟ್ರೋಲಿಯಂ ಉತ್ಪನ್ನ, ಗ್ಯಾಸ್ ಉತ್ಪಾದನೆಯಾಗಲಿದೆ. ಇಂತಹ ವಿಷಯಗಳಿಗೆ ನೀವು (ಮಾಧ್ಯಮಗಳು) ಆದ್ಯತೆ ಕೊಡಿ ಎಂದು ಹರ್ದೀಪ್‌ಸಿಂಗ್ ಕೋರಿದರು.
ಕೇಂದ್ರ ಸರ್ಕಾರದ ಯೋಜನೆಗಳ ಲಾನುಭವಿಗಳೊಂದಿಗೆ ಸಂವಾದ, ವಂಚಿತರಿಗೆ ಅಧಿಕಾರಿಗಳ ಜತೆ ಸಂಪರ್ಕ ಕಲ್ಪಿಸುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆ ಉದ್ದೇಶವೆಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
