ಮಂಡ್ಯ:ಹಲವು ಮಹನೀಯರ ಹೋರಾಟದ ಫಲವಾಗಿ ಅಸ್ತಿತ್ವಕ್ಕೆ ಬಂದಿರುವ ಸಮಗ್ರ ಕರ್ನಾಟಕದ ಐಕ್ಯತೆಯನ್ನು ಕಾಪಾಡಿಕೊಂಡು ಕನ್ನಡಿಗರ ಅಭಿವೃದ್ದಿಗೆ ಶ್ರಮಿಸೋಣ ಎಂದು ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು ಹೇಳಿದರು.ನಗರದ ಮಹಾವೀರ ವೃತ್ತದ ಆಟೋ ಚಾಲಕರ ಸಂಘದ ವತಿಯಿಂದ ಬುಧವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಹಾಗೂ ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿ ಮಾತನಾಡಿದರು.ಅಖಂಡ ಕರ್ನಾಟಕದಲ್ಲಿ ರಾಜ್ಯೋತ್ಸವ ನಿತ್ಯೋತ್ಸವ ಆಗಬೇಕು. ಆಟೋ ಚಾಲಕರು ಕನ್ನಡವನ್ನು ಉಳಿಸುವಲ್ಲಿ ಮತ್ತು ಬೆಳೆಸುವಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸಿದ್ದಾರೆ. ಆಟೋ ಚಾಲಕರು ಒಗ್ಗಟ್ಟಿನ ಹೋರಾಟದ ಮೂಲಕ ತಮ್ಮ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ನಗರಸಭೆಯಿಂದ ದೊರೆಯುವ ಅನುಕೂಲಗಳನ್ನು ಮಾಡಿಕೊಡಲು ಸದಾ ಸಿದ್ದವಿರುವುದಾಗಿ ಭರವಸೆ ನೀಡಿದರು.ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್, ಹೊಸಹಳ್ಳಿ ಶಿವಕುಮಾರ್, ಪ್ರಜ್ವಲ್, ಮಹದೇವು, ಲೋಕಸರ ಕುಮಾರ್, ಮನೀಷ್, ಹೊಸಹಳ್ಳಿ ಕೃಷ್ಣ, ಕಲಾವಿದರಾದ ಪ್ರಕಾಶ್, ಸಂತೆಕಸಲಗೆರೆ ಬಸವರಾಜು, ಗೊರವಾಲೆ ರುದ್ರಪ್ಪ ಇತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − ten =
Remember me
