ಮೈಸೂರು:ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ನೀಡುವ ಪ್ರತಿಷ್ಠಿತ ‘ರಾಜ್ಯೋತ್ಸವ ಪ್ರಶಸ್ತಿ’ಗೆ ಪ್ರಸಕ್ತ ವರ್ಷ ನಗರದ ಹಿರಿಯ ಪತ್ರಿಕಾ ವಿತರಕ ಜವರಪ್ಪ ಭಾಜನರಾಗಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ, ಸಾಧನೆ ಮಾಡಿರುವ ಗಣ್ಯರನ್ನು ಗುರುತಿಸಿ ಪ್ರತಿವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ. ಆದರೆ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರ ವಿಭಾಗದಿಂದಲೂ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ವಿಶೇಷವೆನಿಸಿದೆ. ಅಂತೆಯೆ, 2023ರ ಸಾಲಿನಲ್ಲಿ ಪತ್ರಿಕಾ ವಿತರಕರ ವಿಭಾಗದಿಂದ ಜವರಪ್ಪ ಅವರು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
‘ಇಳಿ ವಯಸ್ಸಿನಲ್ಲಿಯೂ ಮನೆ ಮನೆಗೆ ಸೈಕಲ್​ನಲ್ಲಿ ಪತ್ರಿಕೆ ಹಂಚುವ ನನ್ನನ್ನು ಗುರುತಿಸಿ ‘ರಾಜ್ಯೋತ್ಸವ’ ಪ್ರಶಸ್ತಿ ನೀಡಿರುವುದಕ್ಕೆ ತುಂಬ ಸಂತಸವಾಗುತ್ತಿದೆ’ ಎಂದು ಜವರಪ್ಪ ಪ್ರತಿಕ್ರಿಯಿಸಿದ್ದಾರೆ.
‘15 ವರ್ಷದವನಾಗಿದ್ದಾಗಲೇ ನಾನು ಪತ್ರಿಕೆ ವಿತರಿಸುವ ಕೆಲಸ ಆರಂಭಿಸಿದೆ. ಸತತ 56 ವರ್ಷಗಳಿಂದ ಪತ್ರಿಕೆ ವಿತರಿಸುವ ಕೆಲಸ ಮಾಡಿಕೊಂಡು ಬರುತ್ತಿದ್ದು, ನನಗೆ ಈಗ 71 ವರ್ಷ ವಯಸ್ಸು. ಮುಂಜಾನೆಯೇ ಗಾಳಿ, ಮಳೆ, ಚಳಿ ಎನ್ನದೆ ಎದ್ದುಹೋಗಿ 250ಕ್ಕೂ ಹೆಚ್ಚು ಮನೆಗಳಿಗೆ 300ಕ್ಕೂ ಹೆಚ್ಚು ಪತ್ರಿಕೆ ಹಂಚುವ ಕೆಲಸ ಮಾಡುತ್ತೇನೆ. ಬಳಿಕ ಬೇರೆ ಕಡೆಯೂ ಸೇಲ್ಸ್ ಕೆಲಸ ಮಾಡಿಕೊಂಡು ಕುಟುಂಬವನ್ನು ನಿರ್ವಹಣೆ ಮಾಡುತ್ತಿದ್ದೇನೆ. ಆದರೆ ಇದುವರೆಗೂ ಸರ್ಕಾರ ಅಥವಾ ಸಂಘ-ಸಂಸ್ಥೆಗಳಿಂದ ನಾನು ಯಾವುದೇ ಸೌಲಭ್ಯ ಪಡೆದಿರಲಿಲ್ಲ. ಸಿದ್ದರಾಮಯ್ಯ ಸರ್ಕಾರ ನನ್ನನ್ನು ಗುರುತಿಸಿರುವುದರಿಂದ ಸಂತೋಷವಾಗಿದೆ’ ಎಂದು ಅವರು ಹೇಳಿದರು.
Kannada Rajyotsava Award 2023: 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, 68 ಜನರ ಪಟ್ಟಿ ಇಲ್ಲಿದೆ

ಸರ್ಕಾರಿ ಶಾಲೆಗೆ 2 ಎಕರೆ ಜಮೀನು ದಾನ ಮಾಡಿ ಮಕ್ಕಳ ಶಿಕ್ಷಣಕ್ಕೆ ನೆರವಾದ ಹುಚ್ಚಮ್ಮಗೆ ರಾಜ್ಯೋತ್ಸವ ಪ್ರಶಸ್ತಿ

ನಟ ದರ್ಶನ್ ವಿರುದ್ಧ ದೂರು ಕೊಟ್ಟ ಮಹಿಳೆ​: ಹರಿದುಹೋದ ಬಟ್ಟೆ, ಹೊಟ್ಟೆಗೆ ಗಾಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 7 =
Remember me
