ಬೆಂಗಳೂರು:ಮಧ್ಯಂತರ ರಜೆ ಮಧ್ಯೆಯೂ ಶಾಲಾ ಶಿಕ್ಷಕರು ಅ.31ರಂದು ವಾಲ್ಮೀಕಿ ಜಯಂತಿ ಮತ್ತು ನ.1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಮಾಡಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ರಜೆಯ ಮಧ್ಯೆಯೂ ಕರೊನಾ ಪ್ರಮಾಣಿತ ಕಾರ್ಯಾಚರಣಾ ವಿಧಾನ(ಎಸ್​ಒಪಿ) ಅನುಸರಿಸುವ ಮೂಲಕ ವಾಲ್ಮೀಕಿ ಜಯಂತಿ ಮತ್ತು ಕನ್ನಡ ರಾಜ್ಯೋತ್ಸವ ಆಚರಿಸಬೇಕು. ಈ ವೇಳೆ ಸುರಕ್ಷತಾ ಕ್ರಮ ಅನುಸರಿಸಬೇಕು. ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿ ಹಾಜರಿರಬೇಕು ಎಂದು ಇಲಾಖೆ ತಿಳಿಸಿದೆ.
ಈ ಬಾರಿಯ ವಾಲ್ಮೀಕಿ ಜಯಂತಿ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯಾವುದೇ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶ ನೀಡಬಾರದು. ಇಲ್ಲಿಯವರೆಗೂ ವಿದ್ಯಾಗಮ ಯೋಜನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಸಾಧನೆ ಮತ್ತು ಕೊರತೆಯನ್ನು ಪಟ್ಟಿ ಮಾಡಲು ಹಾಗೂ ಸದರಿ ವಿಶ್ಲೇಷಣೆ ಅನುಸಾರ ಕಲಿಕೆಗೆ ಅವಶ್ಯಕ ಬೋಧನಾ ಕಲಿಕಾ ಯೋಜನೆ, ಕಲಿಕಾ ಸಾಮಗ್ರಿ ತಯಾರಿಕೆ ಮುಂತಾದ ಕಾರ್ಯಗಳನ್ನು ಕೈಗೊಳ್ಳಬೇಕೆಂದು ಶಿಕ್ಷಣ ಇಲಾಖೆ ತಿಳಿಸಿದೆ.
ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಸರ್ಕಾರ ಶಿಕ್ಷಕರಿಗೆ ತಾತ್ಕಾಲಿಕ ರಜೆ ನೀಡಿದೆ. ಈ ನಡುವೆ ಎಂದಿನಂತೆ ವಾಲ್ಮೀಕಿ ಜಯಂತಿ ಮತ್ತು ಕನ್ನಡ ರಾಜ್ಯೋತ್ಸವವನ್ನು ಶಾಲೆಯಲ್ಲಿ ಆಚರಿಸುವಂತೆ ಶಿಕ್ಷಕರಿಗೆ ಇಲಾಖೆ ಸೂಚಿಸಿದೆ.
ಕರೊನಾ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ! ನೇರ ಸಂಪರ್ಕದಿಂದಲೇ ಈ ರೋಗ ಹರಡುತ್ತೆ

ಕ್ಲೈಮ್ಯಾಕ್ಸ್​ ಹಂತಕ್ಕೆ ಶಿರಾ ಉಪಸಮರ, ಅಬ್ಬರಿಸಿದ ಅತಿರಥಮಹಾರಥರ ದಂಡು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − one =
Remember me
