ಮಂಡ್ಯ:ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಸಿಗುವ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಒತ್ತಾಯಿಸಿದರು.ಜಲ್ಲಾ ಕಸಾಪದಿಂದ ನಗರದ ಲಕ್ಷ್ಮೀ ಜನಾರ್ಧನ ಶಿಕ್ಷಣ ಸಂಸ್ಥೆಯ ಬಯಲು ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಕನ್ನಡಿಗರಿಗೆ ಅನುಕೂಲವಾಗುವಂತಹ ಡಾ.ಸರೋಜಿನಿ ಮಹಿಷಿ ವರದಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸರ್ಕಾರಗಳ ಗಮನಹರಿಸುತ್ತಿಲ್ಲ. ಇನ್ನಾದರೂ ಈ ಬಗ್ಗೆ ಕ್ರಮ ವಹಿಸುವಂತೆ ಮನವಿ ಮಾಡಿದರು.ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಮಹಿಳಾಧ್ಯಕ್ಷೆ ಅಂಜನಾ ಶ್ರೀಕಾಂತ್ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಮಾಜಿ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ, ಕಸಾಪ ಜಿಲ್ಲಾಧ್ಯಕ್ಷ ಸಿ.ಕೆ.ರವಿಕುಮಾರ ಚಾಮಲಾಪುರ, ಮೈಸೂರು ವಿವಿ ಸಿಂಡಿಕೇಟ್ ಸದಸ್ಯ ಡಾ.ಈ.ಸಿ.ನಿಂಗರಾಜ್‌ಗೌಡ, ಕೃಷಿ ಮಾರಾಟ ಇಲಾಖೆ ನಿರ್ದೇಶಕ ಸಿ.ಎಸ್.ಕರೀಗೌಡ ಇತರರಿದ್ದರು. 75 ಜನರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
