ಮಂಡ್ಯ:ಜಿಲ್ಲಾಡಳಿತದಿಂದ ನೀಡಲಾಗುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಹಿತ್ಯ ಕ್ಷೇತ್ರವನ್ನು ಕಡೆಗಣಿಸಿರುವುದಕ್ಕೆ ಯುವ ಬರಹಗಾರರ ಬಳಗದ ಅಧ್ಯಕ್ಷ ಟಿ.ಸತೀಶ್ ಜವರೇಗೌಡ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಾಹಿತ್ಯದ ಮೂಲಕ ಕನ್ನಡ ಪರಂಪರೆ ಬೆಳೆದಿದೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಪ್ರತಿಬಿಂಬವೇ ಸಾಹಿತ್ಯ. ನಾಡು ಮತ್ತು ನುಡಿ ಎಂದ ಕೂಡಲೇ ಕನ್ನಡ ಸಾಹಿತ್ಯ ಸಂಪತ್ತು ಮತ್ತು ಅದನ್ನು ಕಟ್ಟಿ ಬೆಳೆಸಿದ ಸಾಹಿತಿಗಳೇ ಅನುಗಾಲವೂ ನೆನಪಾಗುತ್ತಾರೆ. ಹೀಗಿರುವಾಗ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಒಬ್ಬ ಸಾಹಿತಿಯ ಹೆಸರು ಇಲ್ಲದಿರುವುದು ಅಪರಾಧ ಎಂದು ಕಿಡಿಕಾರಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವಂತಹ ಹಲವರು ಜಿಲ್ಲೆಯಲ್ಲಿದ್ದಾರೆ. ಇವರೆಲ್ಲ ಆಯ್ಕೆ ಸಮಿತಿಯ ಕಣ್ಣಿಗೆ ಬೀಳದಿರುವುದು ಅವರ ಸಂಕುಚಿತ ಜ್ಞಾನಕ್ಕೆ ಹಿಡಿದ ಕನ್ನಡಿ. ಈ ಅಸಮತೋಲನವನ್ನು ಸರಿಪಡಿಸಿ ಮಹಿಳಾ ಆದ್ಯತೆಯ ಜತೆಗೆ ಸಾಹಿತ್ಯ ಕ್ಷೇತ್ರದ ಕನಿಷ್ಟ ಮೂರು ಜನರನ್ನು ಪರಿಗಣಿಸಬೇಕೆಂದು ಒತ್ತಾಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 16 =
Remember me
