ಮಂಡ್ಯ: ಕರೊನಾ ವೈರಸ್ ಹಾವಳಿಯ ನಡುವೆಯೂ ಭಾನುವಾರ ಜಿಲ್ಲಾದ್ಯಂತ ನಾಡಹಬ್ಬ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ನಗರದ ಸರ್‌ಎಂವಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ, ಕೆಆರ್‌ಎಸ್ ಅಣೆಕಟ್ಟೆ ಪುನಶ್ಚೇತನಗೊಳಿಸಲು 58.46 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಅದು ಶೀಘ್ರದಲ್ಲಿ ಮುಗಿಯಲಿದೆ. ವಿಶ್ವೇಶ್ವರಯ್ಯ ನಾಲೆಯ ಜಾಲದ 2ನೇ ಹಂತದ 46.25 ಕಿ.ಮೀವರೆಗಿನ ಆಧುನೀಕರಣ ಕಾಮಗಾರಿ 330.48 ಕೋಟಿ ರೂ. ಕೈಗೆತ್ತಿಕೊಳ್ಳಲಾಗಿದೆ. ಅಲ್ಲದೆ, ಜಿಲ್ಲೆಯ ವಿವಿಧ ತಾಲೂಕಿನಲ್ಲಿರುವ ಪ್ರವಾಸಿ ತಾಣಗಳ ಅಭಿವೃದ್ಧಿಗೆ 13.19 ಕೋಟಿ ರೂ. ವೆಚ್ಚದಲ್ಲಿ 15 ಕಾಮಗಾರಿ ಮಂಜೂರಾಗಿದೆ ಎಂದರು.ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್, ತಾಪಂ ಅಧ್ಯಕ್ಷೆ ಎಚ್.ಎಸ್.ಶಿವಕುಮಾರಿ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿಪಂ ಸಿಇಒ ಎಸ್.ಎಂ.ಜುಲ್‌ಫಿಖಾರ್ ಉಲ್ಲಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಎಎಸ್ಪಿ ಧನಂಜಯ, ನಗರಸಭೆ ಸದಸ್ಯ ಶ್ರೀಧರ್ ಇತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + fourteen =
Remember me
