ಬೆಂಗಳೂರು:ಕನ್ನಡ ಭಾಷಿಕರು, ಪ್ರದೇಶ ಏಕೀಕರಣವಾದ ರಾಜ್ಯೋತ್ಸವ ಸಡಗರ ಹಾಗೂ ಕರ್ನಾಟಕ ಎಂಬ ಮರು ನಾಮಕರಣವಾಗಿ 50ನೇ ವರ್ಷಕ್ಕೆ ಪದಾರ್ಪಣೆ ಮಾಡಿದ ಸುವರ್ಣ ಸಂಭ್ರಮ ಇಂದು ರಾಜ್ಯಾದ್ಯಂತ ಮನೆ ಮಾಡಿದೆ. ಕನ್ನಡಿಗರ ಅಸ್ತಿತ್ವ ಮತ್ತು ಆಸ್ಮಿತೆಯ ಸಂಕೇತವಾಗಿರುವ ಹಳದಿ-ಕೆಂಪು ಬಾವುಟ ಇಂದು ರಾಜ್ಯದೆಲ್ಲೆಡೆ ಹಾರಾಡಲಿದ್ದು, ಎಲ್ಲೆಡೆ ಕನ್ನಡ ಡಿಂಡಿಮ ಮೊಳಗಲಿದೆ. ಈ ಸುದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಗಣ್ಯರು ಸಾಮಾಜಿಕ ಜಾಲತಾಣ ಮೂಲಕ ರಾಜ್ಯದ ಜನತೆಗೆ ಶುಭ ಹಾರೈಸಿದ್ದಾರೆ.
ಗೌರವದಿಂದ ಸ್ಮರಿಸೋಣಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದಿರುವ ಸಿಎಂ ಸಿದ್ದರಾಮಯ್ಯ, ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ.
1973ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದಿದ್ದಾರೆ.
ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ…pic.twitter.com/ES4MqJU6CJ
— Siddaramaiah (@siddaramaiah)November 1, 2023

ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ ಇಂದಿಗೆ 50 ವರ್ಷ ಪೂರೈಸಿದ್ದು, ಕನ್ನಡದ ಅಸ್ಮಿತೆಯ ಉಳಿವಿಗಾಗಿ ಹಾಗೂ ಕನ್ನಡಿಗರ ಏಳಿಗೆಗಾಗಿ, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಶುಭಕೋರಿದರು.
ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ ಇಂದಿಗೆ 50 ವರ್ಷ ಪೂರೈಸಿದ್ದು, ಕನ್ನಡದ ಅಸ್ಮಿತೆಯ ಉಳಿವಿಗಾಗಿ ಹಾಗೂ ಕನ್ನಡಿಗರ ಏಳಿಗೆಗಾಗಿ, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ.
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ.pic.twitter.com/yntkGQYzfe
— H D Deve Gowda (@H_D_Devegowda)November 1, 2023

ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರೈಸೋಣನಾಡಿನ ಹಾಗೂ ಜಗತ್ತಿನೆಲ್ಲೆಡೆ ನೆಲೆಸಿರುವ ಸಮಸ್ತ ಕನ್ನಡ ಬಂಧುಗಳಿಗೆ 68ನೇ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಹಾಗೆಯೇ, ‘ಕರ್ನಾಟಕ’ವೆಂದು ಹೆಸರಾಗಿ ಇಂದಿಗೆ 50 ವರ್ಷ. ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆಗಳನ್ನು ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರೈಸೋಣ. ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಶುಭ ಹಾರೈಸಿದರು.
ನಾಡಿನ ಹಾಗೂ ಜಗತ್ತಿನೆಲ್ಲೆಡೆ ನೆಲೆಸಿರುವ ಸಮಸ್ತ ಕನ್ನಡ ಬಂಧುಗಳಿಗೆ ೬೮ನೇ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಹಾಗೆಯೇ, ‘ಕರ್ನಾಟಕ’ವೆಂದು ಹೆಸರಾಗಿ ಇಂದಿಗೆ ೫೦ ವರ್ಷ.ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆಗಳನ್ನು ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆಯನ್ನು…pic.twitter.com/uG4EGaIQ9X
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)November 1, 2023

ದೃಢಸಂಕಲ್ಪ ಸದಾ ನಮ್ಮದಾಗಿರಲಿನಾಡಿನ ಏಕೀಕರಣಕ್ಕೆ ಹೋರಾಡಿದ ಎಲ್ಲ ಮಹನೀಯರ ಸಂಸ್ಮರಣೆಗಳ ಜೊತೆಗೆ ಕನ್ನಡ ಉಳಿಸುವ, ಬೆಳೆಸುವ ದೃಢಸಂಕಲ್ಪ ಸದಾ ನಮ್ಮದಾಗಿರಲಿ. ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಅಭಿಮಾನಪೂರ್ವಕ ಶುಭಾಶಯಗಳು.
ನಾಡಿನ ಏಕೀಕರಣಕ್ಕೆ ಹೋರಾಡಿದ ಎಲ್ಲ ಮಹನೀಯರ ಸಂಸ್ಮರಣೆಗಳ ಜೊತೆಗೆ ಕನ್ನಡ ಉಳಿಸುವ, ಬೆಳೆಸುವ ದೃಢಸಂಕಲ್ಪ ಸದಾ ನಮ್ಮದಾಗಿರಲಿ. ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಅಭಿಮಾನಪೂರ್ವಕ ಶುಭಾಶಯಗಳು.#ಕನ್ನಡ_ರಾಜ್ಯೋತ್ಸವ#ಕರ್ನಾಟಕರಾಜ್ಯೋತ್ಸವpic.twitter.com/FuzaIYDoHB
— B.S.Yediyurappa (@BSYBJP)November 1, 2023

ಜಗದಗಲ ಹಬ್ಬಲಿ ಕರ್ನಾಟಕ ಸಂಭ್ರಮ, ಮೊಳಗಲಿ ಕನ್ನಡ ಡಿಂಡಿಮ. ವಿಶ್ವದಾದ್ಯಂತ ನೆಲೆಸಿರುವ ಸಮಸ್ತ ಹೆಮ್ಮೆಯ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ವಿಶ್ವದ ಸಮಸ್ತ ಕನ್ನಡಿಗರಿಗೆ 68 ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು‌‌. ಜೈ ಕರ್ನಾಟಕ..!#ಕನ್ನಡರಾಜ್ಯೋತ್ಸವ#ರಾಜ್ಯೋತ್ಸವ_ರಾಷ್ಟ್ರೋತ್ಸವpic.twitter.com/53Kmr111rk
— Basavaraj S Bommai (@BSBommai)November 1, 2023

ನಾಡಿನ ಸರ್ವ ಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡದ ನೆಲ, ಜಲದ ಮಕ್ಕಳಾದ ನಾವು ಹೆಮ್ಮೆಯಿಂದ ಕನ್ನಡತನವನ್ನು ಎತ್ತಿ ಹಿಡಿಯೋಣ! ಸಿರಿಗನ್ನಡಂ ಗೆಲ್ಗೆ! ಸಿರಿಗನ್ನಡಂ ಬಾಳ್ಗೆ!#ಕನ್ನಡ_ರಾಜ್ಯೋತ್ಸವ#KannadaRajyotsavapic.twitter.com/47A5FUwu3v
— KJ George (@thekjgeorge)November 1, 2023

ಕನ್ನಡ ರಾಜ್ಯೋತ್ಸವಎಲ್ಲಾದರೂ ಇರು ಎಂತಾದರು ಇರುಎಂದೆಂದಿಗೂ ನೀ ಕನ್ನಡವಾಗಿರುಕನ್ನಡವೇ ಸತ್ಯ, ಕನ್ನಡವೇ ನಿತ್ಯಸಮಸ್ತ ನಾಡಿನ ಜನತೆಗೆಕನ್ನಡ ರಾಜ್ಯೋತ್ಸವದ ಶುಭಾಶಯಗಳು.#ಕನ್ನಡರಾಜ್ಯೋತ್ಸವpic.twitter.com/VRWlNATXqE
— Jagadish Shettar (@JagadishShettar)November 1, 2023

ಕನ್ನಡಕ್ಕೆ ಬಲ ಕಾಯ್ದೆ ಶೀಘ್ರ ಜಾರಿ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಈ ತಿಂಗಳಲ್ಲೇ ಅನುಷ್ಠಾನ

ಸುವರ್ಣ ಕರ್ನಾಟಕ, ಸುವರ್ಣ ಹೆಜ್ಜೆಗಳು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − three =
Remember me
