ಬೆಂಗಳೂರು:ಕನ್ನಡ ಸಾಹಿತ್ಯ ಪರಿಷತ್ತಿನ ಮಳಲಿ ವಸಂತಕುಮಾರ್ ಸಾಹಿತ್ಯ ದತ್ತಿನಿಧಿ ಪುರಸ್ಕಾರಕ್ಕೆ ಮಂಡ್ಯ ಜಿಲ್ಲೆಯ ಹಿರಿಯ ಬರಹಗಾರ ರಾಗೌ ಕಾವ್ಯನಾಮದ ಡಾ. ರಾಮೇಗೌಡ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಮನುಕುಲದ ಮಾತುಗಾರ ಎಂದೇ ಹೆಸರಾಗಿದ್ದ ಡಾ. ಮಳಲಿ ವಸಂತ ಕುಮಾರ್ ಶ್ರೇಷ್ಠ ವಾಗ್ಮಿಗಳು ಮತ್ತು ಬರಹಗಾರರಾಗಿದ್ದರು. ಕನ್ನಡಪರ ಹೋರಾಟದಲ್ಲಿ ಮಂಚೂಣಿಯಲ್ಲಿದ್ದ ಅವರು ಬರಹಗಾರರನ್ನು ಪ್ರೋತ್ಸಾಹಿಸುವಲ್ಲಿ ಸಿದ್ದ ಹಸ್ತರು. ಅವರ ಹೆಸರಿನಲ್ಲಿ ಅವರ ಕುಟುಂಬ ವರ್ಗದವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿನಿಧಿಯನ್ನು ಸ್ಥಾಪನೆ ಮಾಡಿದ್ದು ಬರಹಗಾರರಿಗೆ, ಕನ್ನಡಪರ ಹೋರಾಟಗಾರರಿಗೆ ಈ ಪುರಸ್ಕಾರವನ್ನು ನೀಡಲಾಗುತ್ತದೆ.
2024ನೇ ಸಾಲಿನ ಮಳಲಿ ವಸಂತ ಕುಮಾರ್ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿರುವ ಡಾ. ರಾಮೇಗೌಡ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಈರೇಗೌಡನ ದೊಡ್ಡಿಯವರು. 37 ವರ್ಷಗಳ ಕಾಲ ಮೈಸೂರಿನ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಇವರು ಕವಿತೆ, ಮಕ್ಕಳ ಸಾಹಿತ್ಯ, ನಾಟಕ, ವಿಮರ್ಶೆ, ಜಾನಪದ, ಗ್ರಂಥ ಸಂಪಾದನೆ ಮೊದಲಾದ ಕ್ಷೇತ್ರಗಳಲ್ಲಿ ಎಂಬತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.
ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ, ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗಶೆಟ್ಟಿ, ಡಾ. ಪದ್ಮಿನಿ ನಾಗರಾಜು, ಗೌರವ ಕೋಶಾಧ್ಯಕ್ಷರಾದ ಬಿ.ಎಂ. ಪಟೇಲ್ ಪಾಂಡು ಮತ್ತು ದತ್ತಿ ದಾನಿಗಳ ಪರವಾಗಿ ಶಾಂತ ವಸಂತ ಕುಮಾರ್ ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + five =
Remember me
