ಧಾರವಾಡ:ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ(96) ಅವರು ಖಾಸಗಿ ಆಸ್ಪತ್ರೆಯಲ್ಲೇ ಬೆಳಗಿನ ಜಾವ ನಿಧನರಾಗಿದ್ದಾರೆ.
ಜಾನಪದ ವಿದ್ವಾಂಸರು, ಲೇಖಕರು ಹಾಗೂ ಸಾಹಿತಿಗಳು ಆಗಿರುವ ಗುರುಲಿಂಗ ಕಾಪಸೆಯವರು ನಾಡಿನ ಹೆಸರಾಂತ ಸಾಹಿತಿಯಾಗಿದ್ದರು. ಗುರುಲಿಂಗ ಕಾಪಸೆ ಅವರು ತಮ್ಮ 96ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಇಂದು ಮಧ್ಯಾಹ್ನ 2ರವರೆಗೆ ದುರ್ಗಾ ಕಾಲೋನಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗುರುಲಿಂಗ ಕಾಪಸೆ ಅವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಪಾರ ಅಭಿಮಾನಿ ಬಳಗವನ್ನಗಲಿದ್ದಾರೆ.
1928ರ ಎಪ್ರಿಲ್ 2ರಂದು ಜನಿಸಿದ ಗುರುಲಿಂಗ ಕಾಪಸೆ ಮೂಲ ಊರು ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ ಬಿಕೆ ಗ್ರಾಮ. ಸದ್ಯ ಧಾರವಾಡದ  ಸಪ್ತಾಪುರ ದುರ್ಗಾ ಕಾಲೋನಿಯಲ್ಲಿ ನೆಲೆಸಿದ್ದರು. ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದರು.
ಮಕ್ಕಳ ಸಾಹಿತ್ಯದಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದ ಕಾಪಸೆ ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮಧುರ ಚೆನ್ನರ ಜೀವನ ಹಾಗೂ ಕೃತಿಗಳ ಕುರಿತ ಮಹಾಪ್ರಬಂಧ ರಚಿಸಿದ್ದರು. ಮಧುರ ಚೆನ್ನ, ಅಕ್ಕಮಹಾದೇವಿ, ಅರವಿಂದರು, ಬಸವೇಶ್ವರ, ಹಲಸಂಗಿ ಗೆಳೆಯರು ಸೇರಿ ಹಲವು ಕೃತಿಗಳನ್ನು ರಚಿಸಿದ್ದಾರೆ. ಮರಾಠಿಯಿಂದ ಅನೇಕ ಕೃತಿಗಳನ್ನು ಕನ್ನಡ ಅನುವಾದ ಮಾಡಿದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ. ಮಕ್ಕಳ ಸಾಹಿತ್ಯದಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಕಾಪಸೆಯವರು ದ.ರಾ.ಬೇಂದ್ರೆ, ಮಧುರ ಚೆನ್ನ ಸೇರಿ ಹಲವು ಸಾಹಿತಿಗಳ ಒಡನಾಡಿಯಾಗಿದ್ದರು.
ಕಾಪಸೆಯವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. 1945ರಲ್ಲಿ ತಮ್ಮ 18ನೇ ವಯಸ್ಸಿನಲ್ಲಿಯೇ ತಮ್ಮೂರಿನಲ್ಲಿ ಶಿಕ್ಷಕರಾಗಿ ಸೇವೆ ಆರಂಭ ಮಾಡಿದ ಕಾಪಸೆ ಕಾಲಾಂತರದಲ್ಲಿ ಧಾರವಾಡಕ್ಕೆ ಬಂದು ನೆಲೆಸಿದ್ದರು. ಅನೇಕ ಸಮ್ಮೇಳನಗಳಲ್ಲಿಯೂ ಪಾಲ್ಗೊಂಡು ವಿದ್ವತ್ ಪೂರ್ಣ ಲೇಖನಗಳನ್ನು ಮಂಡಿಸಿದ್ದಾರೆ. ಇತ್ತೀಚಿನ ಕೃತಿ ಹಲಸಂಗಿ ಗೆಳೆಯರು, ಉಪಯುಕ್ತವಾದ ಕೃತಿ. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದಾರೆ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
