ಬೆಂಗಳೂರು :ಟೋಕಿಯೊ ಒಲಿಂಪಿಕ್ಸ್​ನಲ್ಲಿ ಈಟಿ ಎಸೆತದಲ್ಲಿ ಪ್ರಥಮ ಸ್ಥಾನ ಗೆದ್ದು ಚಿನ್ನಕ್ಕೆ ಕೊರಳೊಡ್ಡಿದ ನೀರಜ್ ಚೋಪ್ರಾಗೆ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಾಧನೆಗೆ ತರಬೇತಿ ನೀಡಿದ್ದ ಶಿರಸಿಯ ಕ್ರೀಡಾ ತರಬೇತುದಾರ ಕಾಶಿನಾಥ್ ನಾಯ್ಕ್ ಅವರಿಗೆ ನಗದು ಬಹುಮಾನ ಘೋಷಿಸಿದ್ದಾರೆ.
ನೀರಜ್ ಚೋಪ್ರ ಚಿನ್ನದ ಪದಕಕ್ಕೆ ಮುತ್ತಿಕ್ಕುವಲ್ಲಿ ಕನ್ನಡಿಗನ ಪಾತ್ರವೂ ಇದೆ. ಅವರಿಗೆ ತರಬೇತಿ ನೀಡಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಾಶಿನಾಥ್ ನಾಯ್ಕ್. 2010 ರ ಕಾಮನ್​ವೆಲ್ತ್ ಗೇಮ್ಸ್​​ನಲ್ಲಿ ಕಾಶಿನಾಥ್ ಈಟಿ ಎಸೆತದಲ್ಲಿ ಕಂಚಿನ ಪದಕ‌ ಗಳಿಸಿದ್ದರು. ಅತ್ಯುತ್ತಮ ಕ್ರೀಡಾ ಸಾಧಕ ಕಾಶಿನಾಥ್ ಗರಡಿಯಲ್ಲಿ ಪಳಗಿದ ನೀರಜ್, ಸ್ವರ್ಣಪದಕ ಗಳಿಸಿ ದೇಶದ ಗೌರವವನ್ನು ಹೆಚ್ಚಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಕಾಶಿನಾಥ್ ನಾಯ್ಕ್ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು ಎಂದಿದ್ದಾರೆ.
ಇದನ್ನೂ ಓದಿ:ವಿಶ್ವದ ಅತಿ ಎತ್ತರದ ಶ್ರೀ ಚಾಮುಂಡೇಶ್ವರಿ ದೇವಿ ವಿಗ್ರಹ ಲೋಕಾರ್ಪಣೆ
ಕ್ರೀಡಾಪಟುಗಳಿಗೆ ಸನ್ಮಾನ: ಟೋಕಿಯೋದಲ್ಲಿ ಅಮೋಘ ಸಾಧನೆಗೈದ ಭಾರತದ 7 ಕ್ರೀಡಾಪಟುಗಳನ್ನು ರಾಜ್ಯ ಸರ್ಕಾರದ ವತಿಯಿಂದ ಸನ್ಮಾನಿಸಲಾಗುವುದು. ಈಗಾಗಲೇ ಸಿಎಂ ಜೊತೆ ಚರ್ಚೆ ನಡೆಸಿದ್ದು, ಕ್ರೀಡಾಪಟುಗಳನ್ನು ಆಹ್ವಾನಿಸಿ ಗೌರವಿಸುವುದಾಗಿ ಸಚಿವ ನಾರಾಯಣಗೌಡ ಹೇಳಿದ್ದಾರೆ.
ಅದೇ ಸಂದರ್ಭದಲ್ಲಿ ತರಬೇತುದಾರ ಕಾಶಿನಾಥ್​ರನ್ನೂ ಸನ್ಮಾನಿಸಲಾಗುವುದು. ಒಲಿಂಪಿಕ್ಸ್​ನಲ್ಲಿ ಭಾಗವಹಿಸಿದ ರಾಜ್ಯದ ಕ್ರೀಡಾಪಟುಗಳಿಗೂ ಗೌರವ ಸಲ್ಲಿಸಲಾಗುವುದು. ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯುವುದೂ ಒಂದು ದೊಡ್ಡ ಸಾಧನೆಯೇ ಆಗಿದೆ. ಟೋಕಿಯೋ ಓಲಂಪಿಕ್ಸ್​ನಲ್ಲಿ ಮೂವರು ಕನ್ನಡಿಗರು ಪಾಲ್ಗೊಂಡು ಉತ್ತಮ ಸಾಧನೆ ತೋರಿದ್ದಾರೆ.
ಪದಕ ಗಳಿಸಿದ ಕ್ರೀಡಾ ಸಾಧಕರನ್ನು ಗೌರವಿಸಿದಂತೆಯೇ ರಾಜ್ಯದ ಹೆಮ್ಮೆಯ ಕ್ರೀಡಾಪಟುಗಳಾದ ಅದಿತಿ ಅಶೋಕ್, ಶ್ರೀಹರಿ ನಟರಾಜ್, ಫೌವಾದ್ ಮಿರ್ಜಾ ಅವರನ್ನೂ ಸನ್ಮಾನಿಸಲಾಗುವುದು‌ ಎಂದು ತಿಳಿಸಿದ್ದಾರೆ.
VIDEO | ಚಿನ್ನ ಗೆದ್ದ ನೀರಜ್​​ ಚೋಪ್ರಾರ ಜಾವಲಿನ್ ಎಸೆತ ನೋಡಿ!
ವೀಕೆಂಡ್​ ಕರ್ಫ್ಯೂ ಲೆಕ್ಕಿಸದೆ ವ್ಯಾಪಾರ, ಓಡಾಟ! ಪೊಲೀಸರಿಗೆ ಕಸರತ್ತು!



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
