ಬೆಂಗಳೂರು:ಕಾಂತಾರ ಸಿನಿಮಾ ಮೂಲಕವಾಗಿ ದೇಶ, ವಿದೇಶಗಳಲ್ಲಿ ಸ್ಯಾಂಡಲ್​ವುಡ್​ ಸಿನಿಮಾ ಖ್ಯಾತಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯದಿದ್ದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಸಿನಿಮಾ ಮಾತ್ರವಲ್ಲದೆ ಕನ್ನಡ ಶಾಲೆಯ ಅಭಿವೃದ್ಧಿಗೂ ಸೇವೆ ಮಾಡುತ್ತಿದ್ದಾರೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು, ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ ನಿಜ ಜೀವನದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.

ತಾವು ಓದಿದ್ದ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದುಕೊಂಡಿದ್ದಾರೆ. ಭಾನುವಾರ ನಡೆದ ಎಸ್‌ಡಿಎಂಸಿ ಸಭೆಯಲ್ಲಿ ರಿಷಬ್‌ ಶೆಟ್ಟಿ ಅವರು, ಶಾಲೆಯನ್ನು ದತ್ತು ತೆಗೆದುಕೊಳ್ಳುವ ನಿರ್ಧಾರವನ್ನು ತಿಳಿಸಿದ್ದಾರೆ.
ಶಾಲೆಗೆ ಭೇಟಿ ನೀಡಿ ಕನ್ನಡ ಶಾಲೆ ಉಳಿಸುವ ಮತ್ತು ಬೆಳೆಸುವ ತನ್ನ ಕನಸನ್ನು ಬಿಚ್ಚಿಟ್ಟರು. ಈ ಸಂದರ್ಭದಲ್ಲಿ ಊರ ಪ್ರಮುಖರು, ಹಿರಿಯರು ಉಪಸ್ಥಿತರಿದ್ದು ಹುಟ್ಟೂರಿನ ಶಾಲೆಯ ದತ್ತು ರಿಷಬ್ ಶೆಟ್ಟಿ ಯವರನ್ನು ಅಭಿನಂದಿಸಿದರು.
ಈ ಶಾಲೆಯಲ್ಲಿ ಪ್ರಸ್ತುತ 71 ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಒಬ್ಬರು ಖಾಯಂ ಶಿಕ್ಷಕರಿದ್ದಾರೆ. ಉಳಿದವರು ಗೌರವ ಶಿಕ್ಷಕರಾಗಿದ್ದಾರೆ.  ರಿಷಬ್‌ ಫೌಂಡೇಶನ್‌ ಮುಂದಿನ ಶೈಕ್ಷಣಿಕ ವರ್ಷದಿಂದ 5 ವರ್ಷಗಳ ಅವಧಿಗೆ ಈ ಶಾಲೆಯನ್ನು ದತ್ತು ಪಡೆದಿದೆ. ಮೂಲಭೂತ ಸೌಕರ್ಯ ಸಹಿತ ಕೊಠಡಿ, ಪ್ರತೀ ತರಗತಿಗೆ ಶಿಕ್ಷಕರು, ಆವರಣ ಗೋಡೆ, ಅಗತ್ಯವಿದ್ದರೆ ವಾಹನದ ವ್ಯವಸ್ಥೆ ಕಲ್ಪಿಸಲಿದೆ.
ಮಾದಕ ಉಡುಗೆ ಮೂಲಕ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದ ಉರ್ಫಿ ಜಾವೇದ್​ಗೆ ಇನ್​ಸ್ಟಾಗ್ರಾಮ್​​ ಸಂಕಷ್ಟ!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − nine =
Remember me
