ಬೆಂಗಳೂರು:ಹೊಂಬಾಳೆ ಫಿಲ್ಮ್ಸ್​ ನಿರ್ಮಾಣ, ರಿಷಬ್​ ಶೆಟ್ಟಿ ರಚನೆ ಹಾಗೂ ನಿರ್ದೇಶನದಲ್ಲಿ ಮೂಡಿ ಬಂದಿರುವ ಕಾಂತಾರ ಸಿನಿಮಾ, ದೇಶದ ಚಿತ್ರರಂಗದಲ್ಲೇ ಭಾರಿ ಸಂಚಲನವನ್ನು ಸೃಷ್ಟಿಸಿದ್ದು ಮಾತ್ರವಲ್ಲದೆ ಅದರ ಹೊರತಾಗಿಯೂ ಹಲವು ರೀತಿಯಲ್ಲಿ ಪರಿಣಾಮ ಬೀರಿದೆ. ಇದೀಗ ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಕಾಂತಾರ ಇಫೆಕ್ಟ್ ಕಾಣಿಸಿದೆ.
ಭೂತಾರಾಧನೆ, ಕೋಲಗಳನ್ನೇ ಪ್ರಮುಖ ಕಥಾಹಂದರವಾಗಿ ಹೊಂದಿರುವ ‘ಕಾಂತಾರ’ ಸಿನಿಮಾದಲ್ಲಿ ಕಥಾನಾಯಕನೇ ದೈವನರ್ತಕ. ಇಂಥದ್ದೊಂದು ಕಥೆ ಹೊಂದಿರು ಕಾಂತಾರ ಐಎಂಡಿಬಿಯಲ್ಲಿ ಅತ್ಯಧಿಕ ರೇಟಿಂಗ್ ಹೊಂದಿರುವ ಭಾರತೀಯ ಸಿನಿಮಾ ಆಗಿ ಹೊರಹೊಮ್ಮಿದ್ದಲ್ಲದೆ ಇದುವರೆಗೆ ಆಗಿರದ ಹಲವು ಪ್ರಥಮಗಳಿಗೆ ನಾಂದಿ ಹಾಡಿ ದಾಖಲೆ ಮೇಲೆ ದಾಖಲೆಗಳನ್ನು ಬರೆದಿದೆ.
ಹಿರಿಯ ನಾಗರಿಕರಾಗಿರುವ ದೈವನರ್ತಕರಿಗೆ ಇದೇ ಸಿನಿಮಾದ ಫಲಶ್ರುತಿಯಾಗಿ ಸರ್ಕಾರ ಮಾಸಾಶನವನ್ನು ಮೊನ್ನೆಮೊನ್ನೆಯಷ್ಟೇ ಘೋಷಿಸಿತ್ತು. ಇದರ ಬೆನ್ನಿಗೇ ಇದೇ ಪ್ರಥಮ ಬಾರಿಗೆ ದೈವನರ್ತಕರೊಬ್ಬರು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಇದಕ್ಕೂ ಕಾಂತಾರವೇ ಕಾರಣ ಎಂಬ ಸಂಗತಿ ಬಹಿರಂಗಗೊಂಡಿದೆ. ಸಿನಿಮಾದ ಮೂಲಕ ದೈವನರ್ತಕರು ಹಾಗೂ ಅವರ ಬದುಕು ದೊಡ್ಡಮಟ್ಟದಲ್ಲಿ ಅನಾವರಣಗೊಂಡಿದ್ದರಿಂದ ರಾಜ್ಯೋತ್ಸವ ಪ್ರಶಸ್ತಿಗೂ ಅವರನ್ನು ಪರಿಗಣಿಸಲಾಗಿದೆ ಎನ್ನಲಾಗಿದೆ. ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ ಆಯ್ಕೆ ಆಗಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ: ಇಸ್ರೋ ಶಿವನ್, ನಟರಾದ ದತ್ತಣ್ಣ-ಅವಿನಾಶ್ ಸೇರಿ 67 ಸಾಧಕರು, 10 ಸಂಸ್ಥೆಗಳಿಗೆ ಪ್ರಶಸ್ತಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
