ಬೆಂಗಳೂರು:ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಶ್ರುತಿ ಅವರ ನೇಮಕವನ್ನು ಸರ್ಕಾರ ಹಿಂಪಡೆದಿದೆ. ಅಚ್ಚರಿ ರೀತಿಯಲ್ಲಿ ಆ ಸ್ಥಾನಕ್ಕೆ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಕ ಮಾಡಿ ಆದೇಶ ಹೊರಬಿದ್ದಿದೆ.
ಈ ಬದಲಾವಣೆ ನಡೆದು 48 ತಾಸು ಕಳೆದರೂ ತೀರ್ಮಾನದ ವಿಷಯ ಶ್ರುತಿ ಅವರ ಗಮನಕ್ಕೆ ಬಂದಿಲ್ಲ. ಸರ್ಕಾರದ ಕಡೆಯಿಂದ ಅಥವಾ ಮುಖ್ಯಮಂತ್ರಿ ಕಚೇರಿಯಿಂದ ಶ್ರುತಿ ಅವರಿಗೆ ತಿಳಿಸುವ ಪ್ರಯತ್ನವನ್ನೂ ಮಾಡಿಲ್ಲ ಎನ್ನಲಾಗಿದೆ.ಶನಿವಾರ ಬೆಳಗ್ಗೆ ಆದೇಶ ಹೊರಟಿದ್ದು, ಭಾನುವಾರ ರಾತ್ರಿ ಮಾಧ್ಯಮದಿಂದಲೇ ಈ ವಿಷಯ ಶ್ರುತಿ ಅವರ ಗಮನಕ್ಕೆ ಬಂದಿದೆ. ವಿಷಯ ತಿಳಿದು ಅವರು ಸಹ ಆಶ್ಚರ್ಯಪಟ್ಟಿದ್ದಾರೆ.
ಅಂದಹಾಗೆ ಕಾಪು ಸಿದ್ದಲಿಂಗಸ್ವಾಮಿ 2013ರಲ್ಲಿ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿದ್ದರು. ಅದಕ್ಕೂ ಮುನ್ನ ಸಿದ್ದಲಿಂಗಸ್ವಾಮಿ ಬಿ.ಎಸ್.ಯಡಿಯೂರಪ್ಪ ಮನೆಯಲ್ಲಿ ಸಹಾಯಕರಾಗಿದ್ದರು. ಅವರೀಗ ಏಕಾಏಕಿ ನಿಗಮ ಮಂಡಳಿಯಲ್ಲಿ ಸ್ಥಾನಪಡೆದುಕೊಂಡು ಅಚ್ಚರಿ ಮೂಡಿಸಿದ್ದಾರೆ. ಶ್ರುತಿಯವರಿಗೆ ಪಕ್ಷದಲ್ಲಿ ಅಥವಾ ಸರ್ಕಾರದಲ್ಲಿ ಬೇರೆ ಜವಾಬ್ದಾರಿ ನೀಡುವ ಬಗ್ಗೆಯೂ ಯಾವುದೇ ಚರ್ಚೆ ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ.
ದೇಶದ ಮೊದಲ ವೈದ್ಯೆಗೆ ಗೂಗಲ್​ನಿಂದ ಡೂಡಲ್​ ನಮನ

ಸಂಗೀತ ನಿರ್ದೇಶಕ ಡಾ.ಕಿರಣ್​ ತೋಟಂಬೈಲ್​ ಮೇಲೆ ರಾಡ್​ನಿಂದ ಹಲ್ಲೆ, ತಲೆಗೆ ಗಾಯ

ರೂಮಾಂಚನ!: ಮತ್ತದೇ ಮುದ ಕ್ಲಬ್​ಹೌಸ್​ನಲ್ಲಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
