ಬೆಂಗಳೂರು:ಗೋವಾ ಸರ್ಕಾರ ಮತ್ತೆ ಕನ್ನಡಿಗರ ಮನೆಗಳನ್ನು ಕೆಡವಿ ಒಕ್ಕೆಲೆಬ್ಬಿಸುತ್ತಿದ್ದು, ಗೋವಾದಲ್ಲಿರುವ ಕನ್ನಡಿಗರೆಲ್ಲರನ್ನು ಒಕ್ಕಲೆಬ್ಬಿಸುವ ಹುನ್ನಾರವಿದ್ದಂತಿದೆ. ರಾಷ್ಟ್ರಪತಿಗಳು ಕೂಡಲೇ ಮಧ್ಯೆ ಪ್ರವೇಶಿಸಿ ಗೋವಾ ಸರ್ಕಾರವನ್ನು ವಜಾಗೊಳಿಸಿ, ಕನ್ನಡಿಗರಿಗೆ ನ್ಯಾಯ ಒದಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕರವೇ ಅಧ್ಯಕ್ಷ ನಾರಾಯಣಗೌಡ, ಉತ್ತರ ಗೋವಾದ ಸಂಗೋಲ್ಡಾ ಪ್ರದೇಶದಲ್ಲಿ ಭಾನುವಾರ 15 ಕ್ಕೂ ಹೆಚ್ಚು ಕನ್ನಡಿಗರ ಮನೆಗಳನ್ನು ಜೆಸಿಬಿ ಬಳಸಿ ಧ್ವಂಸಗೊಳಿಸಲಾಗಿದೆ, ಅವರಿಗೆ ಅನ್ನ ನೀರು ಸೂರು ಇಲ್ಲದಂತೆ ಮಾಡಿರುವುದರನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ನಾಲ್ಕು ದಶಕಗಳಿಂದ ಅಲ್ಲಿ ವಾಸವಾಗಿದ್ದ ಕನ್ನಡಿಗರನ್ನು ಏಕಾಏಕಿ ತೆರವುಗೊಳಿಸಿರುವುದರಿಂದ 15 ಕುಟುಂಬಗಳು ಬೀದಿಪಾಲಾಗಿವೆ. ಸಂತ್ರಸ್ಥ ಕುಟುಂಬಗಳಿಗೆ ಬದಲಿ ಪುನರ್ವಸತಿಯನ್ನು ಕಲ್ಪಿಸಲಾಗಿಲ್ಲ. ಸಿರಿಯಾ, ಲೆಬೆನಾನ್ ದೇಶಗಳಲ್ಲಿ ನಡೆಯುವ ದೌರ್ಜನ್ಯ ಗೋವಾದಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಭಾರತದ ಸಂವಿಧಾನದ 29 ಮತ್ತು 30ನೇ ವಿಧಿಗಳು ಸ್ಪಷ್ಟವಾಗಿ ಭಾಷಾ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡುತ್ತವೆ. ಗೋವಾದಲ್ಲಿ ನಡೆಯುತ್ತಿರುವುದು ಸಂವಿಧಾನ ವಿರೋಧಿ ಕಾರ್ಯಾಚರಣೆ. ದೇಶದ ಯಾವುದೇ ಭಾಗದಲ್ಲಿ ಸರ್ಕಾರವೇ ಮುಂದೆ ನಿಂತು ಭಾಷಾ ಸಮುದಾಯವನ್ನು ಬೀದಿಗೆ ತಳ್ಳಿದ ಉದಾಹರಣೆ ಇಲ್ಲ. ಗೋವಾದಲ್ಲಿ ಕನ್ನಡಿಗರನ್ನು ಗುರಿಯಾಗಿಸಿಕೊಂಡು ಅಲ್ಲಿನ ಸರ್ಕಾರ ಈ ಹಿಂದೆಯೂ ತೆರವು ಕಾರ್ಯಾಚರಣೆ ಮಾಡಿದೆ. ಇದು ಜನಾಂಗೀಯ ದ್ವೇಷದ ಕುಕೃತ್ಯ. ಹೀಗಾಗಿ ಗೋವಾ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು ಎಂದು ನಾರಾಯಣಗೌಡ ಒತ್ತಾಯಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 − ten =
Remember me
