ಬೆಂಗಳೂರು:ರಾಜ್ಯದ ಖಾಸಗಿ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಸಂಬಂಧ ವಿಧೇಯಕವನ್ನು ತಡೆಹಿಡಿದಿರುವ ಸರ್ಕಾರದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಖಂಡಿಸಿದ್ದು, 15 ದಿನಗಳೊಳಗೆ ಸಚಿವ ಸಂಪುಟದ ಸಭೆ ನಡೆಸಿ, ಕನ್ನಡಿಗರ ಹಿತಕಾಯುವ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ೂಷಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ತೀವ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ.
ರಾಜ್ಯದ ಖಾಸಗಿ ಕೈಗಾರಿಕೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸಿ ವಿಧೇಯಕಕ್ಕೆ ಕಳೆದ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿತ್ತು. ಇದೀಗ ಕಾಪೋರ್ರೇಟ್​ ಕಂಪನಿಗಳ ಒತ್ತಡಕ್ಕೆ ಮಣಿದು ವಿಧೇಯಕವನ್ನು ತಡೆಹಿಡಿಯಲು ನಿರ್ಧರಿಸಿದೆ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಸುದ್ದಿಗೋಷ್ಠಿಯಲ್ಲಿ ದೂರಿದರು.
ಖಾಸಗಿ ಕೈಗಾರಿಕೆಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಎರಡು ಬಾರಿ ಭೇಟಿಯಾದಾಗಲೂ, “ಕನ್ನಡಿಗರ ಹಿತಕಾಯುವ ವಿಷಯದಲ್ಲಿ ರಾಜೀಯಾಗುವ ಪಶ್ನೆಯಿಲ್ಲ’ ಎಂದಿದ್ದರು. ಆದರೆ, ಈಗ ಪಟ್ಟಭದ್ರ ಹಿತಾಸಕ್ತಿಗಳು ಅವರ ಕೈಕಟ್ಟಿಹಾಕಿರುವಂತಿದೆ. ಇಂತಹ ಶಕ್ತಿಗಳ ವಿರುದ್ಧ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಇಟ್ಟ ಹೆಜ್ಜೆಯನ್ನು ಹಿಂದಿಡಬಾರದು ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತು ವಿಧೇಯಕವನ್ನು ಸಮರ್ಥಿಸಿಕೊಳ್ಳಬೇಕಿದ್ದ ಸಚಿವ ಸಂಪುಟದ ಕೆಲವು ಸಚಿವರೇ ಅಪಸ್ವರ ಎತ್ತಿದ್ದಾರೆ. ಜತೆಗೆ ಪಕ್ಷಕ್ಕೆಫಂಡ್​ ನೀಡುವ ಉದ್ದಿಮೆದಾರರು, ಕಾಂಗ್ರೆಸ್​ನ ರಾಷ್ಟ್ರೀಯ ನಾಯಕರಿಂದಲೂ ಮುಖ್ಯಮಂತ್ರಿ ಮೇಲೆ ಒತ್ತಡ ಹಾಕಿಸಿರುವ ಸಾಧ್ಯತೆಗಳೂ ಇವೆ ಎಂದರು.
ವಿಧೇಯಕ ವಿರೋಧಿಸುವ ನೆಪದಲ್ಲಿ ಉದ್ಯಮಿ ಮೋಹನ್​ದಾಸ್​ ಪೈ ಸೇರಿದಂತೆ ಕೆಲವು ಉದ್ಯಮಿಗಳು ಕನ್ನಡಿಗರಿಗೆ ಕೌಶಲ ಇಲ್ಲ. ಉದ್ಯೋಗಗಳ ಅರ್ಹತೆ ಇಲ್ಲ ಎಂಬಿತ್ಯಾದಿ ಹೇಳಿಕೆ ನೀಡಿದ್ದಾರೆ. ಇವರು ನಾಲಿಗೆ ಬಿಗಿಹಿಡಿದು ಮಾತನಾಡಬೇಕು. ಮೋಹನದಾಸ್​ ಪೈ ಕನ್ನಡ ನೆಲದಲ್ಲಿ ಹುಟ್ಟಿ, ಈ ನೆಲದ ಅನ್ನ ತಿನ್ನುತ್ತಿದ್ದಾರೆ. ಅವರು ಮೊದಲು ಕನ್ನಡ ನೆಲದ ಋಣ ತೀರಿಸುವ ಕೆಲಸ ಮಾಡಲಿ. ಕನ್ನಡಿಗರನ್ನು ಅವಹೇಳನ ಮಾಡುವ ರೀತಿ ಮಾತನಾಡಿದರೆ ನಾವು ಪಾಠ ಕಲಿಸಬೇಕಾಗುತ್ತದೆ.-ಟಿ.ಎ. ನಾರಾಯಣಗೌಡ, ಕರವೇ ಅಧ್ಯಕ್ಷ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 20 =
Remember me
