ಮಂಗಳೂರು:ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನ ಕಾವಳ ಮೂಡೂರು ಗ್ರಾಮ ಮತ್ತು ಕಾವಳ ಪಡೂರಿನ 3 ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಕಾವಳ ಮೂಡೂರು ಗ್ರಾಮದ ಸರ್ವೇ ನಂ. 164/2ಪಿ1 ರಲ್ಲಿ 0.50 ಎಕರೆ ಮತ್ತು 172/2ಪಿ1 ರಲ್ಲಿ 0.50 ಎಕರೆ ಸೇರಿದಂತೆ 1 ಎಕರೆ ಪ್ರದೇಶದಲ್ಲಿ 2007ರಿಂದ ಗಣಿಗಾರಿಕೆ ನಡೆಯುತ್ತಿದ್ದು, ತನ್ನ ಪರವಾನಗಿ ವ್ಯಾಪ್ತಿ ಮೀರಿ ಸುಮಾರು 3.28 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ಮಾಡಿರುವ ಹಿನ್ನೆಲೆಯಲ್ಲಿ 8,12,87,198 ರೂ. ದಂಡ ಪಾವತಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೂಚಿಸಿದ್ದು ದಂಡ ಪಾವತಿಸದ ಕಾರಣ ಗಣಿಗಾರಿಕೆಯನ್ನು 2021ರ ಡಿಸೆಂಬರ್ ತಿಂಗಳಲ್ಲಿ ಸ್ಥಗಿತಗೊಳಿಸಲಾಗಿದೆ. ಅನಧಿಕೃತ ಗಣಿಗಾರಿಕೆ ನಡೆಸಿರುವ ಮಾಲೀಕರ ವಿರುದ್ಧ ಬಂಟ್ವಾಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾವಳ ಪಡೂರು ಗ್ರಾಮದ ಸರ್ವೇ ನಂ 121/2ಪಿ1 ರಲ್ಲಿ 1.00 ಎಕರೆ ವಿಸ್ತೀರ್ಣದಲ್ಲಿ 2016 ರಿಂದ ಆರಂಭಗೊಅಡಿದ್ದ ಗಣಿಗಾರಿಕೆ 20 ವರ್ಷಗಳ ಅವಧಿಗೆ ಪರವಾನಗಿಯಿದ್ದರೂ ಗುತ್ತಿಗೆದಾರರು ಗೋಮಾಳ ಅತಿಕ್ರಮಿಸಿ ಗಣಿಗಾರಿಕೆ ನಡೆಸುತ್ತಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲಾಗಿದೆ. ಸರ್ವೇ ನಂ 122/3ಪಿ1 ರಲ್ಲಿ 1 ಎಕರೆ ಜಮೀನಿನಲ್ಲಿ 2015ರಿಂದ ಆರಂಭಗೊಂಡಿದ್ದ ಗಣಿಗಾರಿಕೆಯನ್ನು ಅದರ ಗುತ್ತಿಗೆದಾರರು ಮೃತಪಟ್ಟಿದ್ದು ಅದೇ ಗಣಿಗಾರಿಕೆ ಪ್ರದೇಶದಲ್ಲಿ ಅನಧಿಕೃತವಾಗಿ ಬೇರೆ ವ್ಯಕ್ತಿ ಗಣಿಗಾರಿಕೆ ಮಾಡುತ್ತಿರುವುದು ಕಂಡುಬಂದ ಹಿನ್ನಲೆಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲಾಗಿದೆ.
ದೇವಸ್ಥಾನದ ಪರಿಸರವನ್ನು ಅತೀ ಸೂಕ್ಷ್ಮ ವಲಯ ಎಂದು ಘೋಷಣೆ ಮಾಡುವ ಬಗ್ಗೆ ಈಗಾಗಲೇ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಭಕ್ತಾದಿಗಳ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುನೀಲ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 1 =
Remember me
