ಬೆಂಗಳೂರು:ಕನ್ನಡ ಭಾಷಿಕರು, ಪ್ರದೇಶ ಏಕೀಕರಣವಾದ ರಾಜ್ಯೋತ್ಸವ ಸಡಗರ ಹಾಗೂ ಕರ್ನಾಟಕ ಎಂಬ ಮರು ನಾಮಕರಣವಾಗಿ 50ನೇ ವರ್ಷಕ್ಕೆ ಪದಾರ್ಪಣೆ ಮಾಡಿದ ಸುವರ್ಣ ಸಂಭ್ರಮ ಈ ಬಾರಿ ಮೇಳೈಸಿವೆ.ಕನ್ನಡ ನಾಡು, ನುಡಿ, ಪರಂಪರೆ, ಸಂಸ್ಕೃತಿಯ ಹಿರಿಮೆ-ಗರಿಮೆ ಉಲ್ಲಾಸದಲ್ಲಿ ಜನರ ಮಿಂದೇಳುವ ಈ ಸುಸಂದರ್ಭವನ್ನು ಸರ್ಕಾರ ಅರ್ಥಪೂರ್ಣವಾಗಿ ಆಚರಿಸಲು ಸಜ್ಜಾಗಿದ್ದು, ಸಂಘ-ಸಂಸ್ಥೆಗಳು ಅಷ್ಟೇ ಉತ್ಸಾಹದಿಂದ ಸನ್ನದ್ಧವಾಗಿವೆ.‘ಕರ್ನಾಟಕ ಸುವರ್ಣ ಸಂಭ್ರಮ’ ವರ್ಷಪೂರ್ತಿ ಆಚರಿಸಲು ಕಾರ್ಯಕ್ರಮದ ನೀಲನಕ್ಷೆಯನ್ನು ಸರ್ಕಾರ ಜನರ ಮುಂದಿಟ್ಟಿದೆ. ಮೊದಲ ದಿನವಾದ ಬುಧವಾರ ಜನರ ಮನ-ಮನೆ ಹಬ್ಬವಾಗಿಸಲು ಮಾರ್ಗಸೂಚಿ ಹಾಕಿಕೊಟ್ಟಿದ್ದು, ರಾಜ್ಯಾದ್ಯಂತ ಸಂಚರಿಸಲಿರುವ ಜ್ಯೋತಿ ರಥಯಾತ್ರೆಗೆ ನ.2ರ ಸಂಜೆ ಹಂಪಿಯನ್ನು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಬೆಂಗಳೂರು ಸೇರಿ ರಾಜ್ಯದ ಎಲ್ಲೆಡೆ ಕಾರ್ಯಕ್ರಮಗಳು ನಡೆಯಲಿವೆ. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ 68 ಸಾಧಕರು ಮತ್ತು 10 ಸಂಘ-ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರದಾನ ಸಮಾರಂಭ ಬುಧವಾರ ಸಂಜೆ ಏರ್ಪಾಟು
– ಎಲ್ಲರ ಮನಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿ ಬಿಡಿಸಿ, ‘ಕರ್ನಾಟಕ ಸಂಭ್ರಮ-50: ಉಸಿರಾಯಿತು ಕರ್ನಾಟಕ ಹೆಸರಾಗಲಿ ಕರ್ನಾಟಕ ಎನ್ನುವ ೋಷವಾಕ್ಯ ಬರೆಯುವುದು.– ಬೆಳಗ್ಗೆ 9ಕ್ಕೆ ಬಾನುಲಿಯಲ್ಲಿ ನಾಡಗೀತೆ ಮೊಳಗಲಿದೆ. ರಾಷ್ಟ್ರಗೀತೆಗೆ ಗೌರವ ಅರ್ಪಿಸುವ ಹಾಗೆ ಎಲ್ಲರೂ ಎದ್ದು ನಿಂತು ನಾಡಗೀತೆಗೆ ಗೌರವ ಸಮರ್ಪಣೆ– ಎಲ್ಲ ಜಿಲ್ಲಾ, ತಾಲೂಕು, ಗ್ರಾ.ಪಂ. ಕೇಂದ್ರಗಳಲ್ಲಿ ರಾಷ್ಟ್ರ ಧ್ವಜಾರೋಹಣ, ರಾಷ್ಟ್ರ ಗೀತೆ, ನಾಡಗೀತೆ, ನಾಡದೇವಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ.– ಹುಯಿಲಗೋಳ ನಾರಾಯಣ ಅವರ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’, ಕುವೆಂಪು ಅವರ ‘ಎಲ್ಲಾದರು ಇರು ಎಂದಾದರು ಇರು’, ದ.ರಾ.ಬೇಂದ್ರೆಯವರ ‘ ಒಂದೇ ಒಂದೇ ಕರ್ನಾಟಕ ಒಂದೇ’, ಸಿದ್ದಯ್ಯ ಪುರಾಣಿಕರ ‘ ಹೊತ್ತಿತೋ ಹೊತ್ತಿತು ಕನ್ನಡದ ದೀಪ’ ಮತ್ತು ಚನ್ನವೀರ ಕಣವಿಯವರ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ– ಶಾಲಾ, ಕಾಲೇಜು, ವಿಶ್ವವಿದ್ಯಾಲಯಗಳು, ಸರ್ಕಾರಿ, ಅರೆಸರ್ಕಾರಿ, ನಿಗಮ-ಮಂಡಳಿಗಳ ಕಚೇರಿಗಳು, ಬ್ಯಾಂಕ್‌ಗಳು ಹಾಗೂ ಸಂಘ-ಸಂಸ್ಥೆಗಳು ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಅಳವಡಿಸಿಕೊಂಡು ಐದು ಗೀತೆಗಳನ್ನು ಹಾಡುವುದು ಕಡ್ಡಾಯ– ಸಂಜೆ 5ಕ್ಕೆ ಆಯಾ ಊರಿನ ಮೈದಾನಗಳಲ್ಲಿ ಕೆಂಪು-ಹಳದಿ ಬಣ್ಣದ ಗಾಳಿಪಟವನ್ನು ಬಾನೆತ್ತರಕ್ಕೆ ಹಾರಿಸುವುದು.– ರಾತ್ರಿ 7ಕ್ಕೆ ಪ್ರತಿಯೊಬ್ಬರ ಮನೆ, ಕಚೇರಿ, ಅಂಗಡಿ ಮಳಿಗೆಗಳ ಮುಂದೆ ಹಣತೆಯಲ್ಲಿ ಕನ್ನಡ ಜ್ಯೋತಿ ಬೆಳಗಿಸುವುದು.
– ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಗಂಗಾ ಜಲಾಭಿಷೇಕ, ಭುವನೇಶ್ವರಿ ದೇವಿಗೆ ಪಂಚಾಮೃತ ಅಭಿಷೇಕ, ಸಿಎಂ ಸಿದ್ದರಾಮಯ್ಯ, ಸಚಿವರು, ಗಣ್ಯರು ಭಾಗಿ. ಜಾನಪದ ಕಲಾತಂಡಗಳಿಂದ ರಥಬೀದಿಯಲ್ಲಿ ಮೆರವಣಿಗೆ, ಹೆಲಿಕಾಪ್ಟರ್‌ನಿಂದ ಪುಷ್ಪವೃಷ್ಟಿ, ಎದುರು ಬಸವಣ್ಣ ಮಂಟಪದ ಮುಂದೆ ‘ಕನ್ನಡಜ್ಯೋತಿ ರಥಯಾತ್ರೆ’ಗೆ ಚಾಲನೆ– ರಾಜ್ಯಾದ್ಯಂತ ಎಲ್ಲ ಶಾಲೆ, ಕಾಲೇಜುಗಳಲ್ಲಿ ಭಾಷೆ, ನನ್ನ ಹಾಡು, ಪ್ರಬಂಧ, ರಸಪ್ರಶ್ನೆ, ಭಾಷಣ ಸ್ಪರ್ಧೆಗಳು ವಲಯ, ತಾಲೂಕು, ಜಿಲ್ಲಾ, ನಾಲ್ಕು ಕಂದಾಯ ವಿಭಾಗ ಮತ್ತು ರಾಜ್ಯಮಟ್ಟದಲ್ಲಿ ಆಯೋಜನೆ
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:one × 4 =
Remember me
