ಬೆಂಗಳೂರು:ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇಂದು (ಮೇ 21) ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವನ್ನು ಪ್ರಕಟಿಸಿದ್ದು, ಫಲಿತಾಂಶವನ್ನು ಮಂಡಳಿಯ ವೆಬ್‌ಸೈಟ್http//karresults.nic.inನಲ್ಲಿ ವೀಕ್ಷಿಸಬಹುದಾಗಿದೆ.
ಏಪ್ರಿಲ್ 29ರಿಂದ ಮೇ 16ರವರೆಗೆ ಪರೀಕ್ಷೆ ನಡೆಸಲಾಗಿತ್ತು. 1,49,824 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ 1,48,942 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 52,505 ವಿದ್ಯಾರ್ಥಿಗಳು ಪಾಸ್​ ಆಗಿದ್ದು, ಶೇ. 35 ರಷ್ಟು ಫಲಿತಾಂಶ ಬಂದಿದೆ.
ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಪರೀಕ್ಷೆ – 1 ಮತ್ತು ಪರೀಕ್ಷೆ – 2 ರಲ್ಲಿ ವಿಷಯವಾರು ಗಳಿಸಿದ ಅತಿಹೆಚ್ಚು ಅಂಕಗಳನ್ನು ಪರಿಗಣಿಸಿ ಅಂತಿಮ ಫಲಿತಾಂಶವನ್ನುhttps://kseah.karnataka.gov.inಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು.

ಉತ್ತರ ಪತ್ರಿಕೆಯ ಸ್ಕ್ಯಾನ್​ ಪ್ರತಿ ಪಡೆಯಲು, ಮರು ಮೌಲ್ಯಮಾಪನ ಮತ್ತು ಮರುಎಣಿಕೆಗೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು:

ಉತ್ತರ ಪತ್ರಿಕೆಯ ಮರುಮೌಲ್ಯಮಾಪನ:* ಯಾವುದೇ ಅಭ್ಯರ್ಥಿಗಳು ಪರೀಕ್ಷೆ -3 ಕ್ಕೆ ಅರ್ಜಿ ಸಲ್ಲಿಸಲು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಾಗಿಲ್ಲ.* ಯಾವುದೇ ಸಂದರ್ಭದಲ್ಲಿ, “ಕರ್ನಾಟಕ ಪ್ರಿ-ಯೂನಿವರ್ಸಿಟಿ ಕೋರ್ಸ್ ಎಸ್ ಎಲ್ ಪಿ ಇ 1997, 29 (ಎ)” ಪ್ರಕಾರ ಹಿಂದೆ ಗಳಿಸಿದ ಅಂಕಗಳನ್ನು ಮರುಮೌಲ್ಯಮಾಪನದ ನಂತರ ಮರುಸ್ಥಾಪಿಸಲು ಸಾಧ್ಯವಿಲ್ಲ. ಮರುಮೌಲ್ಯಮಾಪನದಲ್ಲಿ ಗಳಿಸಿದ ಅಂಕಗಳೇ ಪರೀಕ್ಷೆ-2ರ ಅಂಕಗಳೆಂದು ಪರಿಗಣಿಸಲಾಗುವುದು.* ಮರುಮೌಲ್ಯಮಾಪಕರ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ ಮತ್ತು ಈ ಬಗ್ಗೆ ಯಾವುದೇ ಮೇಲ್ಮನವಿಗಳಿಗೆ ಅವಕಾಶವಿಲ್ಲ.* ಮರು ಮೌಲ್ಯಮಾಪನದ ಮತ್ತು ಮರುಎಣಿಕೆಯ ಫಲಿತಾಂಶವನ್ನು ಮಂಡಳಿಯhttps://kseeb.karnataka.gov.inಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು. ಅಂಕಗಳ ಮರುಎಣಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ.

1 ವಾರಕ್ಕೂ ಮುಂಚೆಯೇ ಮ್ಯಾಚ್​ ರಿಸಲ್ಟ್​ ಪ್ರಕಟ: ಆರ್​ಸಿಬಿ ಗೆಲುವು ಮೊದಲೇ ಫಿಕ್ಸ್​ ಆಗಿತ್ತಂತೆ​!

ಇದು ದೇವರೇ ಬರೆದ ಸ್ಕ್ರಿಪ್ಟ್​! ಆರ್​ಸಿಬಿಯ ಸೇಡಿನ ಕತೆ ಖಂಡಿತ ಯಶಸ್ವಿಯಾಗುತ್ತೆ, ಈ ಸಲ ಕಪ್​ ನಮ್ದೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × one =
Remember me
